×
Ad

ಅಕ್ರಮ ಮರಳು ಸಾಗಾಟ: ಲಾರಿ ವಶಕ್ಕೆ

Update: 2016-06-15 22:54 IST

ಮಂಗಳೂರು, ಜೂ. 15: ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್‌ನನ್ನು ಅರ್ಕುಳ ಬಳಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಮೂರ್ತಿ ವಶಕ್ಕೆ ಪಡೆದಿದ್ದಾರೆ.

ಅರ್ಕುಳದಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಟಿಪ್ಪರ್‌ನ್ನು ತಡೆದು ನಿಲ್ಲಿಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ವಿಟ್ಲ ಮೂಲದ ಟಿಪ್ಪರ್ ಇಸ್ಮಾಯೀಲ್ ಎಂಬಾತನನ್ನು ವಶಕ್ಕೆ ಪಡೆದು ಮರಳು ಸಹಿತ ಲಾರಿಯನ್ನು ಸ್ವಾಧೀನಪಡಿಸಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News