ಪಕ್ಷದ ತೀರ್ಮಾನಕ್ಕೆ ಬದ್ಧ: ಸಚಿವ ಖಾದರ್
Update: 2016-06-16 18:01 IST
ಮಂಗಳೂರು,ಜೂ.16: ರಾಜ್ಯ ಸಚಿವ ಸಂಪುಟ ಪುನರ್ರಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷರು ಮತ್ತು ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ನೀಡುವುದು, ಬಿಡುವುದು ಮುಖ್ಯಮಂತ್ರಿಗಳ ಪರಮಾಧಿಕಾರ. ರಾಜ್ಯದ ಉದ್ದಗಲಕ್ಕೂ ನೋಡಿಕೊಂಡು ಅವರು ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸಲು ಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷರು, ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಹೇಳಿದರು.