×
Ad

ಕಟೆ್ಟಚ್ಚರ ವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಕರೆ

Update: 2016-06-16 22:52 IST

ಮಡಿಕೇರಿ ಜೂ.16: ಮುಂಗಾರು ಮಳೆಯ ಏರುಪೇರಿನ ನಡುವೆಯೇ ಹಸಿರ ಪರಿಸರದ ಕೊಡಗು ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡತೊಡಗಿದೆ. ಈಗಾಗಲೇ 18 ಡೆಂಗ್  ಾಗೂ 4 ಮಲೇರಿಯಾ ಪ್ರಕರಣಗಳು ಕಂಡುಬಂದಿದ್ದು, ರೋಗ ಹರಡು ವುದನ್ನು ತಡೆಯುವ ಸಲುವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಯವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾಂಕ್ರಾಮಿಕ ಹಾಗೂ ಕೀಟಜನ್ಯ ರೋಗಗಳ ನಿಯಂತ್ರಣ ಕುರಿತು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆ ಯಲ್ಲಿ ಬುಧವಾರ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ನಡೆದ ವಿವಿಧ ಇಲಾಖಾ ಅಧಿಕಾರಿಗಳ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಬಗ್ಗೆ ಜಿಲ್ಲೆಯ ಎಲ್ಲ ಪ್ರದೇಶಗಳಲ್ಲಿ ಜಾಗೃತಿ ಸಪ್ತಾಹ ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು. ಜಿಪಂ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಚಾರುಲತಾ ಸೋಮಲ್ ಮಾತನಾಡಿ, ಮಳೆಗಾಲದ ಅವಧಿಯಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚು ಬಾಧಿ ಸುತ್ತವೆ. ಆದ್ದರಿಂದ ಈ ಬಗ್ಗೆ ಎಚ್ಚರ ವಹಿಸುವುದು ಅಗತ್ಯವಾಗಿದ್ದು, ಸಾರ್ವಜ ನಿಕರಿಗೆ ಮಾಹಿತಿ ಒದಗಿಸಿ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್.ಶ್ರೀರಂ ಗಪ್ಪಮಾತನಾಡಿ, ಜಿಲ್ಲೆಯಲ್ಲಿ 18 ಡೆಂಗ್, 4 ಮಲೇರಿಯಾ ಪ್ರಕರಣಗಳು ಕಂಡು ಬಂದಿದ್ದು, ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸ್ವಚ್ಛತಾ ಸಪ್ತಾಹ ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಎಲ್ಲರೂ ಕೈಜೋಡಿಸುವಂತೆ ಅವರು ಮನವಿ ಮಾಡಿದರು. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಮೀನುಗಾರಿಕೆ, ನೀರಾವರಿ ಮತ್ತಿತರ ಇಲಾಖೆಗಳು ತಮ್ಮ ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಬಗ್ಗೆ ಅರಿವು ಮೂಡಿಸಲು ಪ್ರಯತ್ನಿಸುವಂತೆ ಆರೋಗ್ಯ ಅಧಿಕಾರಿಗಳು ತಿಳಿಸಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವ ಕುಮಾರ್ ಅವರು ಡೆಂಗ್, ಚಿಕನ್‌ಗುನ್ಯಾ, ಮಲೇರಿಯಾ ಮತ್ತಿತರ ಸಾಂಕ್ರಾಮಿಕ ರೋಗದ ಲಕ್ಷಣಗಳು ಹಾಗೂ ನಿಯಂತ್ರಣದ ಬಗ್ಗೆ ಹಲವು ಮಾಹಿತಿ ನೀಡಿದರು. ಜಿಲ್ಲಾ ಸರ್ಜನ್ ಡಾ.ಕೆ.ಬಿ. ಮುತ್ತಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಮಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್.ಬಸವರಾಜು, ಸಮಾಜ ಕಲ್ಯಾಣ ಾಖೆ ಉಪ ನಿರ್ದೇಶಕ ಮಾಯಾದೇವಿ ಗಲಗಲಿ, ಬಿಸಿಎಂ ಇಲಾಖೆಯ ಅಧಿಕಾರಿ ಕೆ.ವಿ. ಸುರೇಶ್, ಮಡಿಕೇರಿ ಗ್ರಾಮಾಂತರ ಪೊಲೀಸ್ ಅಧಿಕಾರಿ ಕರೀಂ ರಾವುತರ್, ಮಹಿಳಾ ಮತ್ತು ಮಕ್ಕಳ ರಕ್ಷಣಾ ಅಧಿಕಾರಿ ನಾಗರಾಜು, ವಾರ್ತಾಧಿಕಾರಿ ಚಿನ್ನಸ್ವಾಮಿ, ನಗರಸಭೆಯ ಸ್ವಚ್ಛತಾ ವಿಭಾಗದ ಅಧಿಕಾರಿ ನೀಲಾಧರ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಮಲೇರಿಯಾದ ಲಕ್ಷಣಗಳು: ಚಳಿ ಬಳಿಕ ವಿಪರೀತ ಜ್ವರ

ಸ್ವಲ್ಪಹೊತ್ತಿನ ಬಳಿಕ ಮೈ ಬೆವರುವುದು

ಮೈ ಕೈ ನೋವು, ತಲೆನೋವು, ಹಲವರಿಗೆ ವಾಂತಿ, ನಿಶ್ಯಕ್ತಿ

ಈ ಲಕ್ಷಣಗಳು ದಿನ ಬಿಟ್ಟು ದಿನ ಅಥವಾ ಪ್ರತಿದಿನ ಬರುವುದು.

ಡೆಂಗ್-ಚಿಕುನ್ ಗುನ್ಯ ಜ್ವರದ ಲಕ್ಷಣಗಳು: ಇದ್ದಕ್ಕಿದ್ದಂತೆ ತೀವ್ರ ಸ್ವರೂಪದಲ್ಲಿ ಜ್ವರ ಬರುವುದು.

 ಹಣೆಯ ಭಾಗದಲ್ಲಿ ಅತ್ಯಂತ ತೀವ್ರ ರೀತಿಯ ತಲೆನೋವು

ಸ್ನಾಯುಗಳು ಹಾಗೂ ಕೀಲುಗಳಲ್ಲಿ ನೋವು

ರುಚಿ ಹಾಗೂ ಹಸಿವು ಕುಂದುವುದು

ವಾಕರಿಕೆ ಮತ್ತು ವಾಂತಿ ಇರುವುದು

ಕಣ್ಣಿನ ಹಿಂಭಾಗದಲ್ಲಿ ನೋವು

ಕಣ್ಣಾಲಿಗಳು ಚಲಿಸಿದಾಗ ನೋವು ಹೆಚ್ಚಾಗುವುದು

ಎದೆ ಹಾಗೂ ಕೈ ಕಾಲುಗಳ ಮೇಲ್ಭಾಗದಲ್ಲಿ ಕೆಂಪು ಗುಳ್ಳೆಗಳು ಕಾಣಿಸಿಕೊಳ್ಳುವುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News