ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
Update: 2016-06-16 23:38 IST
ಮಂಗಳೂರು, ಜೂ.16: ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಜೂ.17ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ಪುರಭವನದಲ್ಲಿ ವಿಶ್ವ ಪರಿಸರ ದಿನಾಚರಣೆ 2016ರ ಅಂಗವಾಗಿ ಪರಿಸರ ಜಾಥಾ, ಪರಿಸರ ಮಾದರಿಗಳ ಪ್ರದರ್ಶನ ಮತ್ತು ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ ಮೈಸೂರಿಗೆ ಪ್ರಯಾಣಿಸಲಿದ್ದಾರೆ.