ಬಂಟ್ವಾಳ: ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರಿಂದ ಆರೋಗ್ಯ ಕೇಂದ್ರಕ್ಕೆ ದಿಢೀರ್ ಬೇಟಿ
Update: 2016-06-17 12:34 IST
ವಿಟ್ಲ, ಜೂ.17: ಬಂಟ್ವಾಳ ತಾಲೂಕಿನಲ್ಲಿ ಡೆಂಗ್ ಸಹಿತ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಹಾಗೂ ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ತಾಲೂಕು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಢೀರ್ ಬೇಟಿ ನೀಡಿ ವೈದ್ಯಾಧಿಕಾರಿ ಡಾ.ಸುರೇಂದ್ರನಾಥ ನಾಯಕ್ ಅವರೊಂದಿಗೆ ಸಮಾಲೋಚನೆ ನಡೆಸಿದರು.
ಆಸ್ಪತ್ರೆಯ ವ್ಯವಸ್ಥೆಗಳನ್ನು ಪರಿಶೀಲಿಸಿದ ತಾಪಂ ಅಧ್ಯಕ್ಷ, ಉಪಾಧ್ಯಕ್ಷರು ಅಗತ್ಯವಿರುವ ಕಡೆಗಳಲ್ಲಿ ಫಾಗಿಂಗ್ ನಡೆಸುವಂತೆ ಸೂಚಿಸಿದರು. ಪರಿಸರವನ್ನು ಸ್ವಚ್ಛವಾಗಿಡುವಂತೆ ಸಾರ್ವಜನಿಕರಿಗೆ ವಿಶೇಷ ಜಾಗೃತಿ ಮೂಡಿಸುವಂತೆಯೂ ಅವರು ಸೂಚಿಸಿದರು.