ಪುತ್ತೂರು: ನಗರಸಭೆಯಿಂದ ಚರಂಡಿಗಳ ಹೂಳೆತ್ತುವ ಕಾರ್ಯ
Update: 2016-06-17 19:02 IST
ಪುತ್ತೂರು, ಜೂ.17: ಮಳೆಗಾಲ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಪುತ್ತೂರು ನಗರ ಸಭೆಯ ವತಿಯಿಂದ ನಗರದ ರಸ್ತೆ ಬದಿಯಲ್ಲಿನ ಚರಂಡಿಗಳ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಬದಿಗಳಲ್ಲಿನ ಸ್ಲಾಬ್‌ಗಳನ್ನು ತೆರವುಗೊಳಿಸಿ ಹೂಳೆತ್ತುವ ಕೆಲಸ ಭರದಿಂದ ನಡೆಯುತ್ತಿದೆ.
ಕಳೆದ ಮೂರು ವಾರಗಳಿಂದ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು, ಈಗಾಗಲೇ ಶೇ. 70ರಷ್ಟು ಪೂರ್ಣಗೊಂಡಿದೆ. ಇನ್ನುಳಿದ ಚರಂಡಿ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲು ಆರೋಗ್ಯ ವಿಭಾಗ ಹಾಗೂ ಗುತ್ತಿಗೆದಾರರಿಗೆ ಆದೇಶ ನೀಡಲಾಗಿದೆ ಎಂದು ನಗರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು ತಿಳಿಸಿದ್ದಾರೆ.