ಕೃಷ್ಣ ಭೈರೇ ಗೌಡ, ಶರಣ ಪ್ರಕಾಶ್ ಪಾಟೀಲ್‌ಗೆ ಕ್ಯಾಬಿನೆಟ್ ಸಚಿವರಾಗಿ ಭಡ್ತಿ
Update: 2016-06-18 22:53 IST
ಬೆಂಗಳೂರು, ಜೂ.18 ಕಳೆದ ಮೂರು ವರ್ಷಗಳಿಂದ ರಾಜ್ಯ ದರ್ಜೆ ಸಚಿವರಾಗಿದ್ದ ಕೃಷಿ ಸಚಿವ ಕೃಷ್ಣ ಬೈರೇಗೌಡ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರಿಗೆ ಕ್ಯಾಬಿನೆಟ್ ಸಚಿವರಾಗಿ ಭಡ್ತಿ ನೀಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಮೂರು ವರ್ಷಗಳ ಬಳಿಕ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ಹದಿನಾಲ್ಕು ಹಾಲಿ ಸಚಿವರನ್ನು ಕೈ ಬಿಟ್ಟು ಹದಿನಾಲ್ಕು ಶಾಸಕರಿಗೆ ಸಚಿವರಾಗಿ ಸಚಿವ ಸಂಪುಟ ಸೇರ್ಪಡೆಗೆ ಅವಕಾಶ ನೀಡಲಾಗಿದೆ.