×
Ad

ರೋಗಗಳ ನಿಯಂತ್ರಣಕ್ಕೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ: ನೇತ್ರಾವತಿ

Update: 2016-06-18 23:26 IST

 ಶಿಕಾರಿಪುರ, ಜೂ.18: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಜನತೆಯಲ್ಲಿ ಜಾಗೃತಿ ಮೂಡಿಸುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯ ಎಂದು ತಾಲೂಕಿನ ತರಲಘಟ್ಟ ಗ್ರಾಪಂ ಅಧ್ಯಕ್ಷೆ ನೇತ್ರಾವತಿ ಸಂತೋಷ್‌ಕುಮಾರ್ ತಿಳಿಸಿದ್ದಾರೆ.

 ತಾಲೂಕಿನ ತರಲಘಟ್ಟ ಕ್ಯಾಂಪ್‌ನಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಚ್ಛ ಪರಿಸರದಿಂದ ಮಾತ್ರ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದ ಅವರು,ವ್ಯಾಪ್ತಿಯಲ್ಲಿನ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಸ್ಪಚ್ಛತೆ ಬಗ್ಗೆ ವಿಶೇಷ ಗಮನಹರಿಸಲು ತಿಳಿಸಿದರು.

 ಗ್ರಾಪಂ ವ್ಯಾಪ್ತಿಯಲ್ಲಿನ ಪ್ರತೀ ಗ್ರಾಮದ ಜನತೆಯಲ್ಲಿ ಸ್ಪಚ್ಛತೆ ಬಗ್ಗೆ ಜಾಗೃತಿಗಾಗಿ ಕಾರ್ಯಕ್ರಮವನ್ನು ಆಯೋಜಿ ಸಬೇಕಾಗಿದೆ ಎಂದ ಅವರು, ಡೆಂಗ್,ಮಲೇರಿಯಾ,ಚಿಕುನ್‌ಗುನ್ಯಾ,ವಾಂತಿಭೇದಿ ಮತ್ತಿತರ ಮಾರಣಾಂತಿಕ ಕಾಯಿಲೆಗಳ ನಿಯಂತ್ರಣಕ್ಕೆ ಸಮುದಾಯದಲ್ಲಿ ಜಾಗೃತಿ ಮೂಡಿಸುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯ ಎಂದರು. ಅಧ್ಯಕ್ಷತೆಯನ್ನು ಗ್ರಾಪಂ ಸದಸ್ಯೆ ಅಲಮೇಲಮ್ಮ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಆರತಿ ಚಿಕ್ಕಪ್ಪ, ಸದಸ್ಯ ರವಿಕುಮಾರ್,ಹಾಲೇಶನಾಯ್ಕ,ಆರೋಗ್ಯ ಶಿಕ್ಷಣಾಧಿಕಾರಿ ಎಂ.ವೈ.ಸಪೂಜಾರ್ ಸಿಬ್ಬಂದಿ ಶಾಲಾ ಸಿಬ್ಬಂದಿ ಗ್ರಾಮಸ್ಥರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News