ಆರ್ಯಾಪು: ಕಾಂಕ್ರಿಟೀಕೃತ ರಸ್ತೆ ಉದ್ಘಾಟನೆ
ಪುತ್ತೂರು, ಜೂ.19: ಆರ್ಯಾಪು ಗ್ರಾಮದ ಸಂಪ್ಯ ವಾಗ್ಲೆ ಎಂಬಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ಕಾಂಕ್ರಿಟ್ ರಸ್ತೆಯನ್ನು ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ರವಿವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮಸ್ಥರ ಬೇಡಿಕೆಯಂತೆ ವಿಶೇಷ ಆದ್ಯತೆ ನೀಡಿ ರಸ್ತೆ ಮಂಜೂರು ಮಾಡಲಾಗಿದೆ, ಮುಂದಿನ ದಿನಗಳಲ್ಲಿ ಸದ್ರಿ ರಸ್ತೆಯ ಆಸುಪಾಸಿನ ಒಳರಸ್ತೆಗಳ ಡಾಮರೀಕರಣಕ್ಕೆ ಅನುದಾನ ಒದಗಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ತಿಳಿಸಿದರು.
ಇದೇ ವೇಳೆ ಸಂಪ್ಯ ಗ್ರಾಮಸ್ಥರ ಪರವಾಗಿ ಶಾಸಕರನ್ನು ಅಭಿನಂದಿಸಲಾಯಿತು. ಸ್ಥಳೀಯ ರಸ್ತೆಗಳ ಡಾಮರೀಕರಣಕ್ಕೆ ಹಾಗೂ ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ನಾಗಬನದ ಪಕ್ಕದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಝಲ್ ರಹಿಮಾನ್, ಯುವ ಕಾಂಗ್ರೇಸ್ ಅಧ್ಯಕ್ಷ ಅರ್ಷದ್ ದರ್ಬೆ ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು. ಉಮೇಶ್ ಎಸ್.ಕೆ ಸ್ವಾಗತಿಸಿ, ವೌನೇಶ ವಿಶ್ವಕರ್ಮ ವಂದಿಸಿದರು.