ಡಿಆರ್‌ಟಿಯಿಂದ ಕಿಂಗ್‌ಫಿಷರ್‌ಗೆ ನೋಟಿಸ್ : ಹೈಕೋರ್ಟ್ ತಡೆ
ಬೆಂಗಳೂರು, ಜೂ.19: 192 ಕೋಟಿ ರೂ. ಸಾಲ ಮರುಪಾವತಿಗೆ ಸಂಬಂಧಿಸಿದಂತೆ ಯುನೈಟೆಡ್ ಬ್ರೇವರೀಸ್ ಹೋಲ್ಡಿಂಗ್ಸ್ ಲಿಮಿಟೆಡ್ ಹಾಗೂ ಕಿಂಗ್ ಫಿಷರ್ ಏರ್‌ಲೈನ್ಸ್ ಲಿಮಿಟೆಡ್ ಕಂಪೆನಿಗೆ ಸಾಲ ವಸೂಲಾತಿ ನ್ಯಾಯಮಂಡಳಿಯು ನೀಡಿರುವ ಡಿಮ್ಯಾಂಡ್ ನೋಟಿಸ್ ಜಾರಿಗೆ ಹೈಕೋರ್ಟ್ ತಡೆ ನೀಡಿದೆ.
ಈ ಸಂಬಂಧ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್, ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಕಾರ್ಪೊರೇಷನ್ ಬ್ಯಾಂಕ್ ಸಾಲ ವಸೂಲಾತಿ ನ್ಯಾಯಮಂಡಳಿಯಲ್ಲಿ ಅಸಲು ದಾವೆ ಸಲ್ಲಿಸಿದ್ದವು. ಇದರ ಅನುಸಾರ ಡಿಆರ್‌ಟಿ ಡಿಮ್ಯಾಂಡ್ ನೋಟಿಸ್ ಜಾರಿಗೆ ಆದೇಶಿಸಿತ್ತು.
ಡಿಆರ್‌ಟಿಗೆ ಈ ನೋಟಿಸ್ ನೀಡುವ ನ್ಯಾಯಾಧಿಕಾರ ಇಲ್ಲ. ಹೀಗಾಗಿ, ಈ ಕ್ರಮವನ್ನು ವಜಾಗೊಳಿಸಿ ಆದೇಶಿಸಬೇಕು ಎಂದು ಕೋರಿ ಯುನೈಟೆಡ್ ಬ್ರೇವರೀಸ್ ಹೋಲ್ಡಿಂಗ್ಸ್ ಲಿಮಿಟೆಡ್ ಹಾಗೂ ಕಿಂಗ್ ಫಿಷರ್ ಏರ್‌ಲೈನ್ಸ್ ಲಿಮಿಟೆಡ್ ಕಂಪೆನಿ ಹೈಕೋರ್ಟ್ ಮೆಟ್ಟಿಲೇರಿದ್ದವು.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಅವರು ನೋಟಿಸ್ ಜಾರಿಗೆ ಮೂರು ತಿಂಗಳ ತಡೆ ನೀಡಿದರು.