×
Ad

ತರೀಕೆರೆ: ಆಶ್ರಯ ನಿವೇಶನಗಳ ಹಂಚಿಕೆ ಕಾರ್ಯಕ್ರಮ

Update: 2016-06-20 23:29 IST

ತರೀಕೆರೆ, ಜೂ.20: ತಾಲೂಕಿನ ಬೇಲೆನಹಳ್ಳಿ ಹಾಗೂ ಅತ್ತಿಮೊಗ್ಗೆ ಗ್ರಾಮ ಪಂಚಾಯಿತ್ ವ್ಯಾಪ್ತಿಯ ನಿವೇಶನ ರಹಿತರಿಗೆ ತಾಲೂಕು ಆಡಳಿತದಿಂದ ಸೋಮವಾರ ಪಟ್ಟಣದ ತಾಪಂ ಸಭಾಂಗಣದಲ್ಲಿ ಶಾಸಕ ಜಿ.ಎಚ್. ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.

ಶಾಸಕ ಜಿ.ಎಚ್. ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿವೇಶನ ರಹಿತ ಬೇಲೆನಹಳ್ಳಿ ಗ್ರಾಪಂ ವ್ಯಾಪ್ತಿಯ ಬಿ.ರಾಮನಹಳ್ಳಿಯ ನಿವಾಸಿಗಳು ಅರ್ಹ ಫಲಾನುಭವಿಗಳನ್ನು ನಿರ್ಲಕ್ಷಿಸಲಾಗಿದೆ. ಬೇರೆಡೆ ವಾಸವಿರುವವರಿಗೆ ಹಾಗೂ ಉಳ್ಳವರಿಗೆ ಆಯ್ಕೆಮಾಡಲಾಗಿದೆ ಎಂದು ಗ್ರಾಮಸ್ಥರಾದ ಸರೋಜ, ಈರಪ್ಪ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿ ಕೆಲ ಕಾಲ ಗೊಂದಲದ ವಾತವರಣ ನಿರ್ಮಾಣವಾಯಿತು.

ಇದಕ್ಕೆ ಉತ್ತರಿಸಿ ಮಾತನಾಡಿದ ಶಾಸಕ ಜಿ.ಎಚ್.ಶ್ರೀನಿವಾಸ್ ಆಯ್ಕೆಯಲ್ಲಿ ಲೋಪವಾಗಿರುವುದು ಗಮನಕ್ಕೆ ಬಂದರೆ ಅಂತಹ ಫಲಾನುಭವಿಗಳ ಆಯ್ಕೆಯನ್ನು ರದ್ದುಮಾಡಲಾಗುವುದು. ಮುಂದಿನ ದಿನಗಳಲ್ಲಿ ಗ್ರಾಮ ಸಭೆ ನಡೆಸಿ ಅವಕಾಶ ವಂಚಿತರಿಗೆ ಉಳಿದಿರುವ 1.5 ಎಕ್ರೆ ಜಾಗದಲ್ಲಿ ನಿವೇಶನ ಹಂಚಲು ಕ್ರಮಕೈಗೊಳ್ಳಲಾಗುವುದು. ಅನರ್ಹರ ಪತ್ತೆಗೆ ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನಾ ಸಮಿತಿ ರಚಿಸಲಾಗುವುದೆಂದರು.

 ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷೆ ಪದ್ಮಾವತಿ ಸಂಜೀವಕುಮಾರ್, ಉಪಾಧ್ಯಕ್ಷೆ ಶಿವಮ್ಮ ಕೃಷ್ಣಮೂರ್ತಿ, ಸದಸ್ಯೆ ಗಿರಿಜಮ್ಮ, ಜಿಪಂ ಸದಸ್ಯೆ ಕೆ.ಜಿ.ರಾಧ, ತಹಶೀಲ್ದಾರ್ ಮಹೇಶ್ಚಂದ್ರ, ಬೇಲೆನಹಳ್ಳಿ ಗ್ರಾಪಂ ಅಧ್ಯಕ್ಷ ಚರಣ್, ಅತ್ತಿಮೊಗ್ಗೆ ಗ್ರಾಪಂ ಅಧ್ಯಕ್ಷೆ ರೂಪಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News