×
Ad

ಬಂಟ್ವಾಳ: ಸಂಚಾರ ಸುವ್ಯವಸ್ಥೆ ಬಗ್ಗೆ ಸಮಾಲೋಚನಾ ಸಭೆ

Update: 2016-06-21 14:20 IST

ಬಂಟ್ವಾಳ, ಜೂ.21: ಬಿ.ಸಿ.ರೋಡ್ ಸೇರಿದಂತೆ ಬಂಟ್ವಾಳ ತಾಲೂಕಿನ ಪ್ರಮುಖ ವ್ಯವಹಾರಿಕ ಪ್ರದೇಶಗಳಲ್ಲಿ ಸಂಚಾರ ಸುವ್ಯವಸ್ಥೆಯ ನಿರ್ವಹಣೆ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆ ವತಿಯಿಂದ ಮಂಗಳವಾರ ಬೆಳಗ್ಗೆ ಬಿಸಿರೋಡ್ ರಕ್ತೇಶ್ವರಿ ದೇವಸ್ಥಾನದ ಮಿನಿ ಹಾಲ್ ನಲ್ಲಿ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ರಿಕ್ಷಾ ಚಾಲಕರು, ಸಾರ್ವಜನಿಕರು ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಮುಖ್ಯಾಧಿಕಾರಿ ಸುಧಾಕರ್, ಸದಸ್ಯ ಗೋವಿಂದ ಪ್ರಭು, ಉಪ ತಹಶೀಲ್ದಾರ್ ರಮೇಶ್ ನಾಯ್ಕ್,  ಬಂಟ್ವಾಳ ಸಂಚಾರ ಪೊಲೀಸ್ ಠಾಣೆ ಎಸೈ ಚಂದ್ರಶೇಖರಯ್ಯ, ಗ್ರಾಮಾಂತರ ಠಾಣೆ ಎಸ್ಸೈ ಎ.ಕೆ.ರಕ್ಷಿತ್ ಗೌಡ, ನಗರ ಠಾಣೆ ಎಸ್ಸೈ ನಂದಕುಮಾರ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News