×
Ad

ಬಿಷಪ್ ಡಾ.ಅಲೋಷಿಯಸ್ ಪೌಲ್ ಡಿಸೋಜರಿಗೆ ಪೌರಸನ್ಮಾನ

Update: 2016-06-21 18:08 IST

ಮಂಗಳೂರು, ಜೂ.21: ಮಂಗಳೂರು ಧರ್ಮಪ್ರಾಂತದ ಬಿಷಪ್ ರೆ.ಡಾ. ಅಲೋಶಿಯಸ್ ಪೌಲ್ ಡಿಸೋಜರ ಅಮೃತೋತ್ಸವದ ಹಿನ್ನೆಲೆಯಲ್ಲಿ ಬಿಷಪ್ ರೆ.ಡಾ. ಅಲೋಶಿಯಸ್ ಪೌಲ್ ಡಿಸೋಜರಿಗೆ ಪೌರಸನ್ಮಾನ ಕಾರ್ಯಕ್ರಮ ನಡೆಯಿತು.

ನಗರದ ಪುರಭವನದಲ್ಲಿ ನಡೆದ ಸಮಾರಂಭದಲ್ಲಿ ಮೇಯರ್ ಹರಿನಾಥ್ ಅಧ್ಯಕ್ಷತೆ ವಹಿಸಿದ್ದರು. ನಿಟ್ಟೆ ವಿಶ್ವ ವಿದ್ಯಾನಿಲಯದ ಸಹ ಕುಲಾಧಿಪತಿ ಡಾ.ಎಂ. ಶಾಂತಾರಾಮ್ ಶೆಟ್ಟಿ, ಬೆಂಗಳೂರಿನ ಆರ್ಚ್ ಬಿಷಪ್ ಡಾ. ಬರ್ನಾರ್ಡ್ ಮೊರಾಸ್, ರಾಮಕೃಷ್ಣ ಮಠದ ಸ್ವಾಮೀಜಿ ಜಿತಕಾಮಾನಂದಜಿ, ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್, ಶಾಸಕ ಜೆ.ಆರ್. ಲೋಬೊ, ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ ಆಳ್ವ, ಎಂ.ಪಿ. ನೊರೋನ್ಹಾ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor