ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ
Update: 2016-06-21 19:03 IST
ಕೋಲ್ಕತಾ, ಜೂ.21: ಮಾಜಿ ಆಟಗಾರರಾದ ಸೌರವ್ ಗಂಗುಲಿ, ಸಚಿನ್ ತೆಂಡುಲ್ಕರ್ ಹಾಗೂ ವಿವಿಎಸ್ ಲಕ್ಷ್ಮಣ್ ಅವರನ್ನೊಳಗೊಂಡ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿಯು ಭಾರತದ ಮಾಜಿ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಹೆಸರನ್ನು ಟೀಮ್ ಇಂಡಿಯಾದ ಕೋಚ್ ಹುದ್ದೆಗೆ ಶಿಫಾರಸು ಮಾಡಿದೆ.
ಟೀಮ್ ಇಂಡಿಯಾದ ಕೋಚ್ ಹುದ್ದೆಗೆ ಸಾಕಷ್ಟು ಅರ್ಜಿಗಳು ಸಲ್ಲಿಕೆಯಾಗಿದ್ದವು. ಅಂತಿಮ ಪಟ್ಟಿಯಲ್ಲಿ 21 ಆಕಾಂಕ್ಷಿಗಳಿದ್ದರು. ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿಯು ಬುಧವಾರ ಕೋಲ್ಕತಾದ ಖಾಸಗಿ ಹೊಟೇಲ್‌ನಲ್ಲಿ ಕೋಚ್ ಹುದ್ದೆಯ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿತ್ತು. ಎಲ್ಲ ಅಭ್ಯರ್ಥಿಗಳ ಸಂದರ್ಶನದ ಬಳಿಕ ಕುಂಬ್ಳೆ ಹೆಸರನ್ನು ಕೋಚ್ ಹುದ್ದೆಗೆ ಶಿಫಾರಸು ಮಾಡಲಾಗಿದೆ.
ಜೂ.24ರಂದು ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಕೋಚ್ ಹುದ್ದೆಗೆ ಹೆಸರನ್ನು ಅನುಮೋದಿಸಲಾಗುತ್ತದೆ.