×
Ad

ಶ್ಯಾಮ್‌ಭಟ್ ಸೇರಿ ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2016-06-21 21:02 IST

 ಬೆಂಗಳೂರು, ಜೂ. 21: ಬಹುದಿನಗಳಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಯುಕ್ತರಾಗಿದ್ದ ಶ್ಯಾಮ್‌ಭಟ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಬಿಡಿಎ ಆಯುಕ್ತರನ್ನಾಗಿ ಡಾ.ರಾಜ್ ಕುಮಾರ್ ಕತ್ರಿ, ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನಾಗಿ ಡಾ.ಇ.ವಿ.ರಮಣರೆಡ್ಡಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಡಾ.ಬಿ.ಬಸವರಾಜು ಅವರನ್ನು ತಕ್ಷಣದಿಂದಲೇ ನಿಯೋಜನೆಗೊಳ್ಳುವಂತೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News