‘ಜೀವರಕ್ಷಕ ಪ್ರಶಸ್ತಿ’ ಯೋಜನೆ ಶೀಘ್ರ ಜಾರಿ: ಯುಟಿ ಖಾದರ್
ಬೆಂಗಳೂರು, ಜೂ. 21: ರಸ್ತೆ ಅಪಘಾತಗಳ ಸಂದ ರ್ಭಗಳಲ್ಲಿ ಗಾಯಾಳುಗಳನ್ನು ರಕ್ಷಣೆ ಮಾಡುವ ವರನ್ನು ಪ್ರೋತ್ಸಾಹಿಸಲು ‘ಜೀವ ರಕ್ಷಕ ಪ್ರಶಸ್ತಿ’ ಯೋಜನೆ ಜಾರಿಗೆ ಸಿದ್ಧತೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಮಂಗಳವಾರ ವಿಕಾಸಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಜೀವ ರಕ್ಷಕ ಪ್ರಶಸ್ತಿ ಯೋಜನೆ ಅನುಷ್ಠಾನ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಜಾರಿಗೆ ಬರಲಿದೆ. ಆ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ ಎಂದರು.
ತಾಲೂಕುಗಳಲ್ಲಿ ತುರ್ತುನಿಗಾ ಘಟಕ: ಜಿಲ್ಲಾಸ್ಪತ್ರೆಗಳ ಮೇಲಿನ ಒತ್ತಡ ತಗ್ಗಿಸುವ ದೃಷ್ಟಿಯಿಂದ ರಾಜ್ಯದ 121 ಪ್ರಮುಖ ತಾಲೂಕು ಸರಕಾರಿ ಆಸ್ಪತ್ರೆಗಳಲ್ಲಿ ತುರ್ತು ನಿಗಾ ಘಟಕ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದ ಅವರು, ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಕಲ್ಪಿಸುವ ಕ್ರಮ ಕೈಗೊಳ್ಳಲಾಗಿದೆ ಎಂದರು.
ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ಕಲ್ಪಿಸುವುದು ಸರಕಾರದ ಉದ್ದೇಶ. ಆ ನಿಟ್ಟಿನಲ್ಲಿ ಇಲಾಖೆಯಲ್ಲಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿ ಸಲಾಗುತ್ತಿದೆ ಎಂದ ಅವರು, ಮೂರು ವರ್ಷದೊಳಗಿನ ಶ್ರವಣ ದೋಷವುಳ್ಳ ಮಕ್ಕಳಿಗೆ ಉಚಿತವಾಗಿ ಯಂತ್ರ ಅಳವಡಿಸುವ ಯೋಜನೆ ಅಂತಿಮ ಹಂತದಲ್ಲಿದೆ ಎಂದರು.
ತಡೆಯಾಜ್ಞೆ ತೆರವಿಗೆ ಕ್ರಮ: ವೈದ್ಯರ ಗ್ರಾಮೀಣ ಭಾಗದ ಸೇವೆ ಕಡ್ಡಾಯ ವಿಚಾರಕ್ಕೆ ಸಂಬಂಧ ಹೈಕೋರ್ಟ್ ತಡೆಯಾಜ್ಞೆ ತೆರವಿಗೆ ಸರಕಾರ ಕ್ರಮ ಕೈಗೊಂಡಿದೆ ಎಂದ ಅವರು, ಗ್ರಾಮೀಣ ಸೇವೆಗೆ ಬರುವ ಎಂಬಿಬಿಎಸ್ ಪದವಿ ಪಡೆದ ವೈದ್ಯರಿಗೆ 40 ಸಾವಿರ ರೂ. ವೇತನ ನೀಡಲಾಗುವುದು ಎಂದು ಅವರು ತಿಳಿಸಿದರು.
ಆರೋಗ್ಯ ಇಲಾಖೆಯ ಜವಾಬ್ದಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯರು ಹಾಗೂ ಅನುಭವಿಗಳಾದ ಕೆ.ಆರ್.ರಮೇಶ್ ಕುಮಾರ್ ಅವರಿಗೆ ವಹಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಇದೇ ವೇಳೆ ರಮೇಶ್ ಕುಮಾರ್ ಅವರಿಗೆ ತಾನು ಅಭಿನಂದನೆ ಸಲ್ಲಿಸುವೆ ಎಂದರು.
ಆಹಾರ ಇಲಾಖೆಯಲ್ಲಿ ಪಡಿತರ ಚೀಟಿ ವಿತರಣೆ ಸೇರಿ ಅರ್ಹ ಫಲಾನುಭವಿಗೆ ಪಡಿತರ ಧಾನ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆ ನೀಡುವೆ ಎಂದ ಅವರು, ಬಡವರಿಗೆ ಆಹಾರ ದೊರಕಿಸಿಕೊಡಬೇಕೆಂಬ ಸರಕಾರದ ಆಶಯದಂತೆ ತಳಮಟ್ಟದ ಜನರಿಗೆ ಇಲಾಖೆ ಸೌಲಭ್ಯ ಒದಗಿಸಲು ಶ್ರಮಿಸುವೆ ಎಂದು ಭರವಸೆ ವ್ಯಕ್ತಪಡಿಸಿದರು.
ಮತೊ್ತಂದು ಸಾ್ಥನಕೆ್ಕ ಬಡಿ್ತ
ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯವರು ನನಗೆ ಆರೋಗ್ಯ ಇಲಾಖೆಯಿಂದ ಆಹಾರ ಇಲಾಖೆಗೆ ಬಡ್ತಿ ನೀಡಿದ್ದು, ಮತ್ತೊಂದು ಇಲಾಖೆಯ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ ಎಂದು ಇದೇ ವೇಳೆ ಅವರು ಸ್ಪಷ್ಟಣೆ ನೀಡಿದರು.
ಆರೋಗ್ಯ ಇಲಾಖೆಯಲ್ಲಿ ತಾನು ಮೂರು ವರ್ಷ ಗಳ ಕಾಲ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಲು ಅವ ಕಾಶ ಕಲ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ವರಿಷ್ಠರು ಹಾಗೂ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುವೆ ಎಂದು ಅವರು ಹೇಳಿದರು.