×
Ad

ಪ್ರಾಥಮಿಕ ಶಾಲೆಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ: ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ

Update: 2016-06-21 23:23 IST

ಸಾಗರ, ಜೂ.21: ಕಳೆದ ಸಾಲಿನಲ್ಲಿ ಗೆಣಸಿನಕುಣಿ ಸರಕಾರಿ ಶಾಲೆಯ ಪ್ರಾಂಗಣದಲ್ಲಿ ಪೂರ್ವ ಪ್ರಾಥ ಮಿಕ ತರಗತಿಗಳನ್ನು ತೆರೆಯುವಾಗ ಸಾರ್ವಜನಿಕರು ಮತ್ತು ಅಧಿಕಾರಿ ವರ್ಗದಿಂದ ಅಡೆತಡೆಗಳು ಎದುರಾಗಿದ್ದವು. ಆದರೆ ಅವರ ಮನವೊಲಿಸಿ ಪೂರ್ವ ಪ್ರಾಥಮಿಕ ತರಗತಿ ಪ್ರಾರಂಭ ಮಾಡಲಾಗಿತ್ತು ಎಂದು ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಹೇಳಿದರು.

ತಾಲೂಕಿನ ಆವಿನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಜ್ಞಾನದೀಪ ಪೂರ್ವ ಪ್ರಾಥಮಿಕ ಶಾಲೆಯನ್ನು ಉದ್ಘಾಟಿಸಿ ಮಾತನಾಡಿ, ಗೆಣಸಿನಕುಣಿ ಮಾದರಿಯಲ್ಲಿ ಈಗ ಎಲ್ಲ ಭಾಗದಲ್ಲೂ ಪೂರ್ವ ಪ್ರಾಥಮಿಕ ತರಗತಿಗಳನ್ನು ತೆರೆಯಲು ಗ್ರಾಮಸ್ಥರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಮುಂದೆ ಬಂದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಇದರಿಂದ ಮಕ್ಕಳಿಗೆ ಎಲ್.ಕೆ.ಜಿ., ಯು.ಕೆ.ಜಿ. ಹಂತದಿಂದಲೇ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುವ ಅವಕಾಶ ಸಿಗುತ್ತದೆ ಎಂದರು. ಸರಕಾರಿ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಶಾಲೆ ಪ್ರಾರಂಭಿಸಲು ದಾನಿಗಳು ಹಾಗೂ ಎಸ್.ಡಿ.ಎಂ.ಸಿ. ಸದಸ್ಯರ ಸಹಕಾರ ಅಗತ್ಯ. ಇದಕ್ಕೆ ಸರಕಾರದಿಂದ ಯಾವುದೇ ಅನುದಾನ ಬರುವುದಿಲ್ಲ. ಸ್ಥಳೀಯ ಸಂಪನ್ಮೂಲ ಕ್ರೋಡೀಕರಿಸಿಕೊಂಡು ಶಾಲಾ ಚಟುವಟಿಕೆ ಪ್ರಾರಂಭಿಸಬೇಕಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿ ಅ ಧ್ಯಕ್ಷ ಸಿ.ಎಂ. ಸ್ವಾಮಿ ಮಾತನಾಡಿ, ಸರಕಾರಿ ಶಾಲೆ ಗ್ರಾಮದ ದೇಗುಲವಿದ್ದಂತೆ, ಇದನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮ ಆದ್ಯ ಕರ್ತವ್ಯ. ಬಡಮಕ್ಕಳಿಗೆ ಅತಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಎಲ್.ಕೆ.ಜಿ., ಯು.ಕೆ.ಜಿ. ಶಿಕ್ಷಣ ಸರಕಾರಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಸಿಗುತ್ತದೆ ಎಂದರು. ಗ್ರಾಪಂ ಅಧ್ಯಕ್ಷೆ ನಾಗರತ್ನಾ ಕೃಷ್ಣಪ್ಪ, ಗ್ರಾಪಂ ಸದಸ್ಯರಾದ ದೇವರಾಜ ಕುರುವರಿ, ಸಫಿಯಾ ಇನ್ನಿತರರು ಉಪಸ್ಥಿತರಿದ್ದರು.

ಚಂದನಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಟಿ.ವಿ.ಮಲ್ಲೇಶಪ್ಪ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ರವಿ.ಎಂ.ಆರ್.ವಂದಿಸಿದರು. ಬನಶಂಕರಿ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News