×
Ad

ಟ್ರಾಫಿಕ್ ಪೊಲೀಸರಿಂದ ಶಾಲಾ, ಕಾಲೇಜು ವಾಹನಗಳ ತಪಾಸಣೆ

Update: 2016-06-22 11:53 IST

ಮಂಗಳೂರು, ಜೂ.22: ತ್ರಾಸಿಯಲ್ಲಿ ಸಂಭವಿಸಿದ ಭೀಕರ ಅಪಘಾತ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರು ಶಾಲಾ ಕಾಲೇಜು ವಾಹನಗಳ ತಪಾಸಣೆಯನ್ನು ಬಿಗಿಗೊಳಿಸಿದ್ದಾರೆ. ನಗರದ ಹಲವೆಡೆ ವಾಹನಗಳ ತಪಾಸಣೆ ನಡೆಸಿದ ಟ್ರಾಫಿಕ್ ಪೊಲೀಸರು ಅಧಿಕ ಸಂಖ್ಯೆಯಲ್ಲಿ ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುತ್ತಿದ್ದ ವಾಹನಗಳ ಚಾಲಕರಿಗೆ ಎಚ್ಚರಿಕೆ ನೀಡಿದ್ದಾರೆ.

ಟ್ರಾಫಿಕ್ ಎಸಿಪಿ ಉದಯ್ ನಾಯಕ್ ನೇತೃತ್ವದಲ್ಲಿ ನಗರದ ಪ್ರಮುಖ ನಾಲ್ಕು ವೃತ್ತಗಳಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆಗೊಳಪಡಿಸಿದ್ದಾರೆ. ನಗರದ ಲೇಡಿಹಿಲ್, ನವಭಾರತ್, ಬೆಂದೂರ್‌ವೆಲ್ ಮತ್ತು ರೊಸಾರಿಯೋ ವೃತ್ತಗಳಲ್ಲಿ ತಪಾಸಣೆ ನಡೆಸಿದ ಪೊಲೀಸರು ಮಿತಿಗಿಂತ ಅಧಿಕ ಸಂಖ್ಯೆಯಲ್ಲಿ ಮಕ್ಕಳನ್ನು ಹೇರಿಕೊಂಡು ಸಂಚರಿಸುತ್ತಿದ್ದ ವಾಹನಗಳನ್ನು ತಡೆದು, ಮುಂದಿನ ದಿನಗಳಲ್ಲಿ ವಾಹನಕ್ಕೆ ನಿಗದಿಪಡಿಸಿದ ಸಂಖ್ಯೆಗನುಗುಣವಾಗಿ ವಿದ್ಯಾರ್ಥಿಗಳನ್ನು ಕರೆದೊಯ್ಯುವಂತೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ ಕೆಲ ಓಮ್ನಿ ಕಾರುಗಳಲ್ಲಿ 14ರಿಂದ 18 ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪ್ರಕರಣಗಳೂ ಪತ್ತೆಯಾಗಿವೆ. ಇದೇ ವೇಳೆ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಿಗೆ ಹೆಲ್ಮೆಟ್ ಇಲ್ಲದೆ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಸವಾರರಿಗೂ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News