ವಿಶ್ವಮಂಗಳ ಶಾಲೆಯಲ್ಲಿ ಯೋಗ ದಿನಾಚರಣೆ
Update: 2016-06-22 17:31 IST
ಕೊಣಾಜೆ, ಜೂ.22: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವಮಂಗಳ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ಮಂಗಳವಾರ ಆಚರಿಸಲಾಯಿತು. ಪತಂಜಲಿ ಯೋಗಶಿಕ್ಷಣ ಸಮಿತಿಯ ದಕ್ಷಿಣ ವಲಯದ ಸಂಚಾಲಕ ಹರೀಶ್ ಶೆಟ್ಟಿ, ಯೋಗದ ಮಹತ್ವ, ದೇಹ, ಉಸಿರು ಹಾಗೂ ಮನಸ್ಸನ್ನು ಕೇಂದ್ರೀಕರಿಸುವ ವಿಧಾನವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.
ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರು ಅಸೈಗೋಳಿ ಶಾಖೆಯ ಪ್ರಾಯೋಜಕತ್ವದಲ್ಲಿ ವಿಶ್ವಮಂಗಳ ವಿದ್ಯಾಸಂಸ್ಥೆಯು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಬ್ಯಾಂಕಿನ ಮ್ಯಾನೇಜರ್ ಅಮಿತ್ ಶರ್ಮ ಹಾಗೂ ಸಿಬ್ಬಂದಿ, ವಿಶ್ವಮಂಗಳ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಅಪ್ಪಿ ಬಾಯಿ, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶೋಭಾವತಿ, ಇತರ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.