×
Ad

ಗುತ್ತಿಗೆ ಆಧಾರದ ನೇಮಕಾತಿ ಪದ್ಧತಿ ಕೆಬಿಡಲು ಒತ್ತಾಯ

Update: 2016-06-23 23:11 IST

ಮಡಿಕೇರಿ, ಜೂ.23: ಸ್ವಚ್ಛತಾ ಸಿಬ್ಬಂದಿಗೆ ಮಾಸಿಕ ವೇತನ 15 ಸಾವಿರ ರೂ.ನೀಡಬೇಕು, ಗುತ್ತಿಗೆ ಆಧಾರದ ನೇಮಕಾತಿ ಪದ್ಧತಿಯನ್ನು ಕೈಬಿಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸರಕಾರಿ ಆಸ್ಪತ್ರೆಗಳ ಸ್ವಚ್ಛತಾ ಸಿಬ್ಬಂದಿ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಿಬ್ಬಂದಿ, ಸರಕಾರ ಸ್ವಚ್ಛತಾ ಸಿಬ್ಬಂದಿಯನ್ನು ನಿರ್ಲಕ್ಷಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿ ‘ಡಿ’ ಗ್ರೂಪ್ ನೌಕರರನ್ನು ನೆೇಮಕಾತಿ ಮಾಡದೆ ಸ್ವಚ್ಛತಾ ಸಿಬ್ಬಂದಿಯರನ್ನು ಜೀತದಾಳುಗಳಂತೆ ದುಡಿಸಿಕೊಳ್ಳಲಾಗುತ್ತಿದೆಯೆಂದು ಕೊಡಗು ಜಿಲ್ಲಾ ಸರಕಾರಿ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ಸಂಘದ ಅಧ್ಯಕ್ಷ ಪಿ.ಆರ್. ಭರತ್ ಆರೋಪಿಸಿದರು.

  ಜಿಲ್ಲೆಯ ಹಲವು ಸರಕಾರಿ ಆಸ್ಪತ್ರೆಗಳಲ್ಲಿ ದುಡಿಯುತ್ತಿರುವ ಸಿಬ್ಬಂದಿ ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಆಡಳಿತ ವ್ಯವಸ್ಥೆ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ 15 ವರ್ಷಗಳ ಹಿಂದಿನ ಜನಸಂಖ್ಯೆಗೆ ಅನುಗುಣವಾಗಿ 31 ಮಂದಿ ಡಿ ಗ್ರೂಪ್ ನೌಕರರು ಇರಬೇಕಾಗಿತ್ತು. ಆದರೆ, ಕೇವಲ 5 ಮಂದಿ ಕಾರ್ಯ ನಿರ್ವಹಿಸುತ್ತಿದ್ದು, ಇವರು ಕೂಡ ನಿವೃತ್ತಿಯ ದಿನಗಳನ್ನು ಎಣಿಸುತ್ತಿದ್ದಾರೆ. ವೀರಾಜಪೇಟೆ ಆಸ್ಪತ್ರೆಯಲ್ಲಿ 20 ಮಂದಿ ಡಿ ಗ್ರೂಪ್ ನೌಕರರಿಗೆ ಬದಲಾಗಿ ಕೇವಲ 6 ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ಪರಿಸ್ಥಿತಿ ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಇದ್ದು, ಸರಕಾರ ಕೆೇವಲ ಗುತ್ತಿಗೆ ಆಧಾರದಲ್ಲಿ ಸ್ವಚ್ಛತಾ ಸಿಬ್ಬಂದಿಯನ್ನು ನೇಮಕ ಮಾಡಿ, ಕೆಲಸದ ಒತ್ತಡವನ್ನು ಹೇರುತ್ತಿದೆಯೆಂದು ಭರತ್ ಆರೋಪಿಸಿದರು.

ಸಂಘದ ಕಾರ್ಯದರ್ಶಿ ಎಚ್.ಕೆ.ಜಾನಕಿ, ಉಪಾಧ್ಯಕ್ಷೆ ರಜಿನಿ, ಪದಾಧಿಕಾರಿ ಸದಾಶಿವ ಸೇರಿದಂತೆ ಜಿಲ್ಲೆಯ ವಿವಿಧ ಆಸ್ಪತ್ರೆಗಳ ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು. ಬೇಡಿಕೆಗಳು:

ಆಸ್ಪತ್ರೆಯ ಮೂಲಕವೇ ಸಿಬ್ಬಂದಿಗಳಿಗೆ ವೇತನ ನೀಡಬೇಕು, ಗ್ರೂಪ್ ನೌಕರರ ಸಂಖ್ಯೆಗೆ ಅನುಗುಣವಾಗಿ ಸ್ವಚ್ಛತಾ ಸಿಬ್ಬಂದಿಯನ್ನು ನೆೇಮಿಸಬೇಕು, ವರ್ಷಕ್ಕೆ 2 ಜೊತೆ ಸಮವಸ್ತ್ರ, ಗ್ಲೌಸ್, ರೈನ್ ಕೋಟ್, ಶೂ ಮತ್ತಿತರ ಸಾಮಗ್ರಿಗಳನ್ನು ನೀಡಬೇಕು, ವೇತನವನ್ನು 5ನೆ ತಾರೀಕಿನ ಒಳಗಡೆ ವಿತರಿಸಬೇಕು, ಪಿಎಫ್‌ನ್ನು ಪಾವತಿಸದ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಜಿಲ್ಲೆಯಲ್ಲಿರುವ ಎಲ್ಲ ಸ್ವಚ್ಛತಾ ಸಿಬ್ಬಂದಿಯನ್ನು ಡಿ ಗ್ರೂಪ್ ನೌಕರರೆಂದು ಪರಿಗಣಿಸಿ ಖಾಯಂ ಗೊಳಿಸಬೇಕೆಂದು ಸಂಘ ಒತ್ತಾಯಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News