×
Ad

ಕೋಮು ಪ್ರಚೋದನೆ: ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆರೋಪ

Update: 2016-06-23 23:12 IST

ಮಡಿಕೇರಿ, ಜೂ.23: ಸೋಮವಾರ ಪೇಟೆಯಲ್ಲಿ ಬೆರಳೆಣಿಕೆಯಷ್ಟು ಮಂದಿ ಕೋಮು ಪ್ರಚೋದನೆ ನೀಡುವ ಮೂಲಕ ಅಶಾಂತಿಯನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್‌ನ ಅಲ್ಪಸಂಖ್ಯಾತರ ಘಟಕ, ತಪ್ಪಿತಸ್ಥರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಘಟಕದ ಅಧ್ಯಕ್ಷ ಕೆ.ಎ.ಯಾಕೂಬ್, ಇತ್ತೀಚೆಗೆ ಮೋಹನ್ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಅಲ್ಪಸಂಖ್ಯಾತರ ಘಟಕ ಖಂಡಿಸುತ್ತದೆ. ಆದರೆ ತಪ್ಪಿತಸ್ಥರನ್ನು ಬಂಧಿಸದೆ ಅಮಾಯಕರನ್ನು ಬಂಧಿಸುತ್ತಿರುವ ಪೊಲೀಸರ ಕ್ರಮ ಸರಿಯಲ್ಲವೆಂದರು. ಬಶೀರ್ ಎಂಬವರು ಘಟನೆ ಸಂದರ್ಭ ಮಸೀದಿಯಲ್ಲಿದ್ದರು. ಆದರೆ ಇವರನ್ನು ಕೂಡ ಬಂಧಿಸಲಾಗಿದೆ ಎಂದು ಆರೋಪಿಸಿದ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ಕೈಗೊಂಡು ತಪ್ಪಿತಸ್ಥರನ್ನು ಮಾತ್ರ ಬಂಧಿಸಬೇಕೆಂದ

 ು ಒತ್ತಾಯಿಸಿದರು. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರಪೇಟೆಯಲ್ಲಿ ಪ್ರತಿಭಟನೆ ನಡೆಸಿದ ಕೆಲವು ಸಂಘಟನೆಗಳ ಕಾರ್ಯಕರ್ತರು ಅಲ್ಪಸಂಖ್ಯಾತರ ಅಂಗಡಿಗಳ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ. ಪ್ರತಿಯೊಬ್ಬರಿಗೂ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ ಅಮಾಯಕರ ಮೇಲೆ ಹಲ್ಲೆ ನಡೆಸುವುದು ಸರಿಯಾದ ಕ್ರಮವಲ್ಲ. ಐಗೂರು ವ್ಯಾಪ್ತಿಯಲ್ಲಿ ಅಪರಿಚಿತರು ಬಂದು ವಾಹನಗಳನ್ನು ಜಖಂಗೊಳಿಸಿದ್ದಲ್ಲದೇ ಅಲ್ಪಸಂಖ್ಯಾತರ ಮೇಲೆ ಹಲ್ಲೆ ನಡೆಸಿದ್ದಾರೆ. ಪ್ರತಿಭಟನೆ ಸಂದರ್ಭ ನಡೆದ ಹಲ್ಲೆಯಲ್ಲಿ ಗಾಯಗೊಂಡವರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರಪೇಟೆಯಲ್ಲಿ ಅಲ್ಪಸಂಖ್ಯಾ ತರು ಭಯಭೀತರಾಗಿದ್ದು, ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿರುವವರನ್ನು ಪೊಲೀಸರು ತಕ್ಷಣ ಬಂಧಿಸಬೇಕೆಂದು ಎಂದು ಯಾಕೂಬ್ ಒ

 ತ್ತಾಯಿಸಿದರು. ಕ್ಷೇತ್ರದ ಶಾಸಕರು ಹಾಗೂ ಇತರ ರಾಜಕೀಯ ನೇತಾರರು ಯಾವುದೇ ಪಕ್ಷದ ಪರವಾಗಿದ್ದರೂ ಇಂತಹ ಸಂದರ್ಭ ಶಾಂತಿ ಸೌಹಾರ್ದತೆಯನ್ನು ಕಾಪಾಡಲು ಮಧ್ಯಪ್ರವೇಶ ಮಾಡಬೇಕೆಂದು ಅವರು ಒತ್ತಾಯಿಸಿದರು. ಬಿಜೆಪಿ ಮತ್ತು ಸಂಘಪರಿವಾರದವರು ನಮ್ಮ ಸ್ನೇಹಿತರು, ಚುನಾವಣೆ ಬಂದಾಗ ಮಾತ್ರ ರಾಜಕಾರಣ ಮಾಡುತ್ತೇವೆ. ಆದರೆ ಬೆರಳೆಣಿಕೆಯ ಮಂದಿ ಸಮಾಜದ ಶಾಂತಿಯನ್ನು ಕದಡುತ್ತಿದ್ದು, ಜನರು ಜಾಗೃತರಾಗಬೇಕೆಂದು ಯಾಕೂಬ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮೈಸೂರು ವಿಭಾಗೀಯ ಸಂಯೋಕ ಎಂ.ಎ.ಉಸ್ಮಾನ್, ಘಟಕದ ಕಾರ್ಯದರ್ಶಿಗಳಾದ ಮುನೀರ್ ಹಾಗೂ ಖಾಲಿದ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News