ಯುದ್ಧಕಾಲೇ ಶಸ್ತ್ರಾಭ್ಯಾಸ ಮಾಡಿ ಚುನಾವಣೆ ಮಾಡುವ ಪ್ರವೃತ್ತಿ ನನ್ನದಲ್ಲ: ಶಾಸಕ ಮಧು ಬಂಗಾರಪ್ಪ
ಸೊರಬ, ಜೂ.23: ಯುದ್ಧಕಾಲೇ ಶಸ್ತ್ರಾಭ್ಯಾಸ ಮಾಡಿ ಚುನಾವಣೆ ಮಾಡುವ ಪ್ರವೃತ್ತಿ ನನ್ನದಲ್ಲ. ಅಭ್ಯರ್ಥಿಗಳ ಆಯ್ಕೆ ಹಾಗೂ ಜನರೊಂದಿಗೆ ನಿರಂತರ ಸಂಪರ್ಕ ನನ್ನ ಯಶಸ್ಸಿನ ಗುಟ್ಟು ಎಂದು ಶಾಸಕ ಮಧು ಬಂಗಾರಪ್ಪನುಡಿದಿದ್ದಾರೆ.
ಗುರುವಾರ ಸೊರಬ ಪಟ್ಟಣದ ಜೆಡಿಎಸ್ ಮುಖಂಡ ರಾಜು ಕುಪ್ಪಗಡ್ಡೆ ನಿವಾಸದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿ, ನಾನು ಜಾತಿ, ಮತ, ಭೇದವಿಲ್ಲದೆ ಎಲ್ಲಾ ಸಮುದಾಯವನ್ನು ಒಗ್ಗೂಡಿಸಿಕೊಂಡು ರಾಜಕಾರಣ ಮಾಡುತ್ತೇನೆ. ಅಲ್ಲದೆ, ಅಧಿಕಾರ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಎಸಗುವುದಿಲ್ಲ. ಅರ್ಹತೆ ಇರುವ ಹಾಗೂ ಪಕ್ಷಕ್ಕೆ ನಿಷ್ಠರಾಗಿರುವ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿ, ಜನರೊಂದಿಗೆ ನಿರಂತರ ಸಂಪರ್ಕ ಹೊಂದಿರುವವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸುವುದೇ ನನ್ನ ಯಶಸ್ಸಿನ ಗುಟ್ಟು. ಇದಕ್ಕೆ ಕಳೆದ ಜಿಪಂ ಚುನಾವಣೆಯಲ್ಲಿ ತಾಲೂಕಿನ 5 ಕ್ಷೇತ್ರಗಳಲ್ಲಿ 4 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಮುಂದೆ ಜಿಪಂ ಅಧ್ಯಕ್ಷ ಗಾದಿಯನ್ನು ಹಿಡಿಯಲು ನೆರವಾಯಿತು. ಬಿಜೆಪಿ ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ಹಾಗೂ ಜಾತ್ಯತೀತ ಪಕ್ಷ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಮುಸ್ಲಿಂ ಸಮುದಾಯ ತಮ್ಮ ಓಟ್ ಬ್ಯಾಂಕ್ ಎಂದು ಹೇಳಿಕೊಳ್ಳುವ ಮೂಲಕ ಜಾತಿಯನ್ನೇ ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿವೆ. ಅಲ್ಪಸಂಖ್ಯಾತರನ್ನು ಓಲೈಸುವ ಕಾಂಗ್ರೆಸ್ ತಾಲೂಕಿನ 19 ಕ್ಷೇತ್ರಗಳಲ್ಲಿ ಯಾವುದೇ ಕ್ಷೇತ್ರದಲ್ಲೂ ಒಬ್ಬನೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೇ ಅವರನ್ನು ಕೇವಲ ಮತಬ್ಯಾಂಕ್ ಆಗಿ ಉಪಯೋಗಿಸಿಕೊಳ್ಳುತ್ತಿರುವುದು ಅವರ ಜಾತ್ಯತೀತ ಮುಖವಾಡ ರಾಜಕಾರಣಕ್ಕೆ ಸಾಕ್ಷಿಯಾಗಿದೆ. ಮಾಜಿ ಶಾಸಕ ಕುಮಾರ್ ಬಂಗಾರಪ್ಪನವರು ಜಿಪಂ ಚುನಾವಣೆಯಲ್ಲಿ ಮುಖ ತೋರಿಸಿ ಹೋದವರು, ಈಗ ತಾಪಂ ಚುನಾವಣೆಗೆ ಬಂದಿದ್ದಾರೆ. ತಮ್ಮ ರಾಜಕೀಯ ಶಕ್ತಿ ಕುಂದಿರುವುದನ್ನು ಮರೆ ಮಾಚಲು ಜಿಲ್ಲಾ ಮುಖಂಡ ರುಗಳನ್ನು ಕರೆಯಿಸಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಮಾಡುವವರು ಪಕ್ಷಗಳ ಹಣೆ ಬರಹ ಬರೆಯು ವವರು ಮತದಾರ
್ರಭುಗಳೇ ಹೊರತು, ಯಾವುದೇ ಪಕ್ಷಗಳ ನಾಯಕರಲ್ಲ ಎಂಬುದನ್ನು ಅರಿತುಕೊಳ್ಳಲಿ ಎಂದರು. ನಮ್ಮ ಪಕ್ಷ ಆಡಳಿತದಲ್ಲಿ ಇಲ್ಲದಿದ್ದರೂ ನನ್ನ ಶಕ್ತಿ ಮೀರಿ ಬರ ನಿರ್ವಹಣೆ ಮಾಡಿದ್ದೇನೆ. ಮೂಲಭೂತ ಸೌಕರ್ಯಗಳು ಹಾಗೂ ಕುಡಿಯುವ ನೀರನ್ನು ಸಮರ್ಪಕವಾಗಿ ಒದಗಿಸಿರುವುದು ನಮ್ಮ ಆಡಳಿತದ ಹೆಗ್ಗಳಿಗೆ. ಜಿಪಂ ಸದಸ್ಯರು ಕೂಡ ನನ್ನೊಂದಿಗೆ ಕೈ ಜೋಡಿಸಿರುವುದು ಶ್ಲಾಘನೀಯ. ಏಕಮುಖ ಅಧಿಕಾರ ನೀಡಿದರೆ, ತಾಲೂಕಿಗೆ ಇ ನ್ನೂ ಹೆಚ್ಚಿನ ಅಭಿವೃದ್ಧಿ ಮಾಡಲು ನೆರವಾಗುತ್ತದೆ. ಶಾಸಕ, ಜಿಪಂ, ಗ್ರಾಪಂಗೆ ಅಧಿಕಾರ ನೀಡಲು ಬೆಂಬಲ ನೀಡಿದ ಮತದಾರರು ತಾಪಂ ಚುನಾವಣೆಯಲ್ಲೂ ಜೆಡಿಎಸ್ ಪರ ನಿಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಅಧ್ಯಕ್ಷ ಎಚ್.
ಗಣಪತಿ ರಾಜು ಕುಪ್ಪಗಡ್ಡೆ, ಉಪಸ್ಥಿತರಿದ್ದರು.