ಅಪಘಾತ: ಗಾಯಾಳು ಮೃತ್ಯು
Update: 2016-06-23 23:32 IST
ಪಡುಬಿದ್ರೆ, ಜೂ.23: ಎರ್ಮಾಳು ಗ್ರಾಮದ ಅನುಪಮಾ ಬಾರ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾ.10ರಂದು ರಸ್ತೆ ದಾಟಲು ನಿಂತಿದ್ದ ವೇಳೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತೆಂಕ ಎರ್ಮಾಳಿನ ಗೋಪಿ (60) ಎಂಬವರು ಜೂ.21ರಂದು ಸಂಜೆ ವೇಳೆ ಚಿಕಿತ್ಸೆ ಫಲ ಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.