×
Ad

ಪ್ಯಾರಾ ಮೆಡಿಕಲ್ ಕೋರ್ಸ್‌ನ ಸರಕಾರಿ ಕೋಟಾದ ಸೀಟುಗಳಿಗೆ ಅರ್ಜಿ ಆಹ್ವಾನ

Update: 2016-06-24 20:33 IST

ಮಂಗಳೂರು, ಜೂ.24: ರಾಜ್ಯದ 11 ಸರಕಾರಿ ವೈದ್ಯಕೀಯ ಮಹಾವಿದ್ಯಾಲಯಗಳು ಮತ್ತು ಬೆಂಗಳೂರಿನ ದಂತ ಮಹಾವಿದ್ಯಾಲಯ ಹಾಗೂ ವಿವಿಧ ಜಿಲ್ಲೆಗಳಲ್ಲಿರುವ ಖಾಸಗಿ ಪ್ಯಾರಾ ಮೆಡಿಕಲ್ ಸಂಸ್ಥೆಗಳಲ್ಲಿನ ಸರಕಾರಿ ಕೋಟಾದ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಡಿಪ್ಲೊಮಾ ಇನ್ ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿ, ಡಿಪ್ಲೊಮಾ ಇನ್ ಮೆಡಿಕಲ್ ಎಕ್ಸ್‌ರೇ ಟೆಕ್ನಾಲಜಿ, ಡಿಪ್ಲೊಮಾ ಇನ್ ಹೆಲ್ತ್ ಇನ್ಸ್‌ಪೆಕ್ಟರ್, ಡಿಪ್ಲೊಮಾ ಇನ್ ಮೆಡಿಕಲ್ ರೆಕಾರ್ಡ್ ಟೆಕ್ನಾಲಜಿ, ಡಿಪ್ಲೊಮಾ ಇನ್ ಡಯಾಲಿಸಿಸ್ ಟೆಕ್ನಾಲಜಿ, ಡಿಪ್ಲೊಮಾ ಇನ್ ಆಪರೇಶನ್ ಥಿಯೇಟರ್ ಟೆಕ್ನಾಲಜಿ, ಡಿಪ್ಲೊಮಾ ಇನ್ ಆಪ್ತಾಲ್ಮಿಕ್ ಟೆಕ್ನಾಲಜಿ, ಡಿಪ್ಲೊಮಾ ಇನ್ ಡೆಂಟಲ್ ಮೆಕ್ಯಾನಿಕ್ ಹಾಗೂ ಡಿಪ್ಲೊಮಾ ಇನ್ ಡೆಂಟಲ್ ಹೈಜೀನ್ ಮುಂತಾದ ಕೋರ್ಸುಗಳು ಲಭ್ಯವಿದ್ದು ಅರ್ಜಿ ಸಲ್ಲಿಸಲು ಜು.10 ಕೊನೆಯ ದಿನವಾಗಿದೆ.

www.pmdkarnataka.org ಎಸೆಸೆಲ್ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಈ ಕೋರ್ಸುಗಳಿಗೂ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಪಿಯುಸಿಯಲ್ಲಿ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಜೀವಶಾಸ್ತ್ರ ವಿಷಯಗಳನ್ನು ತೆಗೆದುಕೊಂಡು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿದಾರರು 1ರಿಂದ 10ನೆ ತರಗತಿ ಅಥವಾ ಪಿಯುಸಿವರೆಗೆ ಕನಿಷ್ಠ ಏಳು ವರ್ಷ ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು.

ಅರ್ಜಿ ನಮೂನೆ ಹಾಗೂ ಸಂಪೂರ್ಣ ವಿವರಗಳು ಕರ್ನಾಟಕ ರಾಜ್ಯ ಅರೆ ವೈದ್ಯಕೀಯ ಮಂಡಳಿಯ ಜಾಲತಾಣ ದಲ್ಲಿ ಲಭ್ಯವಿದ್ದು, ಮಾಹಿತಿಗಳಿಗಾಗಿ ದಿ ಕ್ಯಾಂಪಸ್ ಕೆರಿಯರ್ ಅಕಾಡಮಿ, 2ನೆ ಮಹಡಿ, ಅಲ್ ರಹಬಾ ಪ್ಲಾಝಾ, ನೆಲ್ಲಿಕಾಯಿ ರಸ್ತೆ, ಮಂಗಳೂರು, (ಮೊ.ಸಂ.9845054191) ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News