×
Ad

ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವನಮಹೋತ್ಸವ

Update: 2016-06-25 15:28 IST

ಕಡಬ, ಜೂ.25. ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಉಪ್ಪಿನಂಗಡಿ ರೋಟರಿ ಕ್ಲಬ್ ನ ಸಹಯೋಗದೊಂದಿಗೆ ಶುಕ್ರವಾರ ಮನಮಹೋತ್ಸವ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಉಪ್ಪಿನಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಡಾ.ನಿರಂಜನ್ ರೈಯವರು ಪರಿಸರ ಸ್ವಚ್ಚತೆ ಮತ್ತು ಪರಿಸರ ಮಾಲಿನ್ಯದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ಉಪ್ಪಿನಂಗಡಿ ರೋಟರಿ ಕ್ಲಬ್ ನ ಅಝೀಝ್ ಬಸ್ತಿಕ್ಕಾರ್, ವಿಜಯಕುಮಾರ್, ಜಾರ್ಜ್ ನೊರೊನ್ಹಾ, ಇಂಡಿಯನ್ ಓವರ್ಸೀಸ್ ಬ್ಯಾಂಕ್ನ್ ರಾಮಕುಂಜ ಶಾಖೆಯ ಪ್ರಬಂಧಕ ಪರಮೇಶ್ವರ ಕಾರಂತ್ ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದಶರ್ಿ ಕೆ.ಸೇಸಪ್ಪ ರೈ ಮಾತನಾಡಿ, ಸಸಿಗಳನ್ನು ನೆಟ್ಟು ಬೆಳೆಸುವ ಅಗತ್ಯತೆಯ ಕುರಿತು ತಿಳಿಸಿದರು. ಶಾಲಾ ಮುಖ್ಯ ಶಿಕ್ಷಕಿ ಗಾಯತ್ರಿ ಯು.ಎನ್.ಸ್ವಾಗತಿಸಿ, ಸಹ ಶಿಕ್ಷಕ ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ದೀಪ್ತಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News