×
Ad

ವಿಟ್ಲ ಕಾಲೇಜಿನಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ

Update: 2016-06-25 16:08 IST

ವಿಟ್ಲ: ಇಲ್ಲಿನ ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ವಿಜ್ಞಾನ ಸಂಘದ ವತಿಯಿಂದ ವಿಟ್ಲ ಸಮುದಾಯ ಆಸ್ಪತ್ರೆಯ ಸಹಯೋಗದೊಂದಿಗೆ 'ಮಲೇರಿಯಾ ವಿರೋಧ ಮಾಸಾಚರಣೆ' ಕಾರ್ಯಕ್ರಮ ನಡೆಯಿತು.   ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಪ್ರಶಾಂತ್ ಮಲೇರಿಯಾ ರೋಗದ ನಿರ್ಮೂಲನದಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಹಾಗೂ ಡೆಂಗ್ಯೂ ರೋಗದ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕರಾದ ವಾಣಿ, ಮಹಬಲೇಶ್ವರ ಭಟ್ ಮೊದಲಾದವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News