×
Ad

ಬಂಟ್ವಾಳ ಲಯನೆಸ್ ಕ್ಲಬ್ ಅಧ್ಯಕ್ಷರಾಗಿ ದೇವಿಕಾ ದಾಮೋದರ್ ಆಯ್ಕೆ

Update: 2016-06-25 16:15 IST

ವಿಟ್ಲ: ಲಯನೆಸ್ ಕ್ಲಬ್ ಬಂಟ್ವಾಳದ 2016-17ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ದೇವಿಕಾ ದಾಮೋದರ್ ಆಯ್ಕೆಯಾಗಿರುತ್ತಾರೆ. ಕಾರ್ಯದರ್ಶಿಯಾಗಿ ಶರ್ಮಿಳಾ ಸುಧಾಕರ್, ಕೋಶಾಧಿಕಾರಿಯಾಗಿ ವೃಂದಾ ಸತೀಶ್ ಕುಡ್ವ ಆಯ್ಕೆಯಾಗಿರುತ್ತಾರೆ. 

ಇವರ ಅಧಿಕಾರ ಸ್ವೀಕಾರ ಸಮಾರಂಭವು ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷರಾದ ಲಕ್ಷ್ಮಣ್ ಕುಲಾಲ್, ಕಾರ್ಯದರ್ಶಿ ಉಮೇಶ್ ಆಚಾರ್, ಕೋಶಾಧಿಕಾರಿ ಶ್ರೀನವಾಸ ಪೂಜಾರಿ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದೊಂದಿಗೆ ಜೂ 26 ರಂದು ಜರಗಲಿದೆ. 

ಲಯನ್ಸ್ ಮಲ್ಟಿಪಲ್ ಜಿಲ್ಲೆಯ ಮಾಜಿ ಅಧ್ಯಕ್ಷ ಕೆ. ಮೋಹನ ಕಾಮತ್ ಅವರು ಪದಗ್ರಹಣ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಅನಂತಕೃಷ್ಣ ಹಾಗೂ ಪುರಸಭಾಧ್ಯಕ್ಷ ಪಿ. ರಾಮಕೃಷ್ಣ ಆಳ್ವ ಭಾಗವಹಿಸಲಿದ್ದಾರೆ. ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಈ ವರ್ಷ ಶತಮಾನೋತ್ಸವ ಸಂಭ್ರಮ ಆಚರಿಸುವ ಪ್ರಯುಕ್ತ ಹತ್ತು ಹಲವಾರು ಸೇವಾ ಕಾರ್ಯಗಳನ್ನು ನಡೆಸಲು ಸಂಸ್ಥೆ ಈಗಾಗಲೇ ಕಾರ್ಯೋನ್ಮುಖವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News