ಹೆಜಮಾಡಿ: ಟೋಲ್‌ಗೇಟ್ ವಿರುದ್ಧ ಪ್ರತಿಭಟನೆ; ಸಮಸ್ಯೆ ಪರಿಹಾರಕ್ಕೆ ಒತ್ತಾಯ
ಪಡುಬಿದ್ರೆ, ಜೂ.25: ಹೆಜಮಾಡಿಯಲ್ಲಿ ನಿರ್ಮಾಣಗೊಂಡಿರುವ ಬೃಹತ್ ಟೋಲ್‌ಗೇಟ್ ಹಾಗೂ ಟ್ರಕ್ ಯಾರ್ಡ್‌ನಿಂದಾಗುವ ಸಮಸ್ಯೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೆಜಮಾಡಿ ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ಹೆಜಮಾಡಿಯಲ್ಲಿ ಶನಿವಾರ ಪ್ರತಿಟನೆ ನಡೆಯಿತು.
ಹೆಜಮಾಡಿಯ ಟೋಲ್‌ಗೇಟ್ ಬಳಿ ಜಮಾಯಿಸಿದ ಹೆಜಮಾಡಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಟೋಲ್‌ಗೇಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹಿಸಬಾರದು. ಸ್ಥಳೀಯ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಬೇಕು, ಜನ ಸಂಚಾರಕ್ಕೆ ಅನುಕೂಲವಾಗುವಂತೆ ಅಂಡರ್ ಪಾಸ್ ನಿರ್ಮಿಸಬೇಕು. ಟೋಲ್‌ಗೇಟ್ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡವರಿಗೆ ನಿವೇಶನ ಹಂಚಿಕೆ ಹಾಗೂ ಹೆಚ್ಚಿನ ಪರಿಹಾರ ನೀಡಬೇಕು. ಪಡುಬಿದ್ರೆ ಬೀಡು ಬಳಿಯ ಸುಜ್ಲಾನ್ ಗೇಟ್‌ನಿಂದ ಕಣ್ಣಂಗಾರ್ ಬೈಪಾಸ್‌ವರೆಗೆ ಶೀಘ್ರ ಸರ್ವಿಸ್ ರಸ್ತೆ ನಿರ್ಮಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಡಿಸಿ ನೇತೃತ್ವದಲ್ಲಿ ಸಭೆ
ಟೋಲ್‌ಗೇಟ್ ಹಾಗೂ ಟ್ರಕ್‌ಯಾರ್ಡ್‌ನಿಂದಾಗುವ ಸಮಸ್ಯೆ ಪರಿಹರಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಒಂದು ವಾರದಲ್ಲಿ ಸಭೆ ನಡೆಸಲಾಗುವುದು ಎಂದು ಶಾಸಕ ವಿನಯಕುಮಾರ್ ಸೊರಕೆ ಹೇಳಿದರು.
ಗ್ರಾ.ಪಂ ಹಾಗೂ ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಗಳನ್ನು ಪರಿಹರಿಸಬೇಕು. ಇಲ್ಲವಾದರೆ ಕ್ಷೇತ್ರದ ಜನರನ್ನು ಸೇರಿಸಿಕೊಂಡು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಕಂದಾಯ ಅಧಿಕಾರಿ ಅಸಾದಿ ಹಾಗೂ ನವಯುಗ ನಿರ್ಮಾಣ ಸಂಸ್ಥೆಯ ಉಪ ಯೋಜನಾ ವ್ಯವಸ್ಥಾಪಕ ಎಂ.ವಿ.ವಿ. ಶ್ರೀನಿವಾಸ್‌ರಿಗೆ ಮನವಿ ಸಲ್ಲಿಸಲಾಯಿತು. ಶಾಸಕ ವಿನಯಕುಮಾರ್ ಸೊರಕೆ ಹಾಗೂ ಉಡುಪಿಯ ಉಪ ತಹಶೀಲ್ದಾರ್ ಅಸದಿಯವರಿಗೆ ಹೋರಾಟ ಸಮಿತಿಯ ವತಿಯಿಂದ ಮನವಿಯನ್ನು ಹಸ್ತಾಂತರಿಸಲಾಯಿತು.
ಜಿ.ಪಂ. ಸದಸ್ಯ ಶಶಿಕಾಂತ ಪಡುಬಿದ್ರೆ, ಹೆಜಮಾಡಿ ಗ್ರಾ. ಪಂ. ಅಧ್ಯಕ್ಷೆ ವಿಶಾಲಾಕ್ಷಿ ಪುತ್ರನ್, ಉಪಾಧ್ಯಕ್ಷ ಸುಧಾಕರ ಕರ್ಕೇರ, ಹೋರಾಟ ಸಮಿತಿಯ ಅಧ್ಯಕ್ಷ ಗುಲಾಂ ಮುಹಮ್ಮದ್, ಗೌರವಾಧ್ಯಕ್ಷ ಶಂಕರ ಶೆಟ್ಟಿ ಪಟೇಲ ಮನೆ, ಪ್ರಧಾನ ಕಾರ್ಯದರ್ಶಿ ಶೇಖರ ಹೆಜಮಾಡಿ, ಅಶೋಕ ದೇವಾಡಿಗ, ಅಬ್ದುಲ್ ಅಜೀಝ್, ನವೀನ್‌ಚಂದ್ರ ಶೆಟ್ಟಿ, ವೈ, ದೀಪಕ್ ಇದ್ದರು.
ಹೆಜಮಾಡಿ ನಾಗರಿಕ ಹೋರಾಟ ಸಮಿತಿಯ ಅಧ್ಯಕ್ಷ ಗುಲಾಂ ಮುಹಮ್ಮದ್, ಪ್ರಧಾನ ಕಾರ್ಯದರ್ಶಿ ಶೇಖರ ಹೆಜಮಾಡಿ, ಜಿಲ್ಲಾ ಪಂಚಾಯತ್ ಸದಸ್ಯ ಶಶಿಕಾಂತ್ ಪಡುಬಿದ್ರೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ, ಅಬ್ದುಲ್ ಅಜೀಝ್ ಹೆಜಮಾಡಿ, ಶಂಕರ ಶೆಟ್ಟಿ ಪಟೇಲರ ಮನೆ, ವಾಮನ ಕೋಟ್ಯಾನ್ ಮತ್ತಿತರರು ಮಾತಾಡಿದರು.
ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ ಪುತ್ರನ್, ಉಪಾಧ್ಯಕ್ಷ ಸುಧಾಕರ ಕರ್ಕೇರ, ಶೇಷಗಿರಿ ರಾವ್, ರಾಲಿ ಡಿ‘ಕೋಸ್ಟ, ಮಾಧವ ಸನಿಲ್, ಲಲಿತಾ ಸಾಲ್ಯಾನ್, ಕಿನ್ನಿಗೋಳಿ ವಲಯ ಬಸ್ ಮಾಲಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ಹೆಗ್ಡೆ, ಕಾರ್ಯದರ್ಶಿ ಸ್ವರಾಜ್ ಶೆಟ್ಟಿ,, ಲಾರಿ ಚಾಲಕ ಮಾಲಕರ ಸಂಘ ಮೂಲ್ಕಿ, ಅಶ್ರಫ್ ಕರ್ನಿರೆ, ಆಟೊ ರಿಕ್ಷಾ ಚಾಲಕ ಮಾಲಕರ ಸಂಘ ಹೆಜಮಾಡಿ, ಪದ್ಮನಾ ಸುವರ್ಣ, ವಸಂತ ದೇವಾಡಿಗ, ಕುಸುಮ ಸಾಲ್ಯಾನ್, ಅಬ್ಬಾಸ್ ಹಾಜಿ ಕನ್ನಂಗಾರ್, ಶೇಕಬ್ಬ ಕೋಟೆ ಮತ್ತಿತರರು ಉಪಸ್ಥಿತರಿದ್ದರು.