×
Ad

ಬಿಡಿಎ ನಿರ್ದೇಶಕರ ಹುದ್ದೆಗೆ ಭೈರತಿ ಬಸವರಾಜು, ಸೋಮಶೇಖರ್ ನೇಮಕ

Update: 2016-06-25 23:37 IST

ಬೆಂಗಳೂರು, ಜೂ.25: ಬಿಡಿಎ ನಿರ್ದೇಶಕರ ಸ್ಥಾನಕ್ಕೆ ಶಾಸಕ ಭೈರತಿ ಬಸವರಾಜು ಹಾಗೂ ಎಸ್.ಟಿ.ಸೋಮಶೇಖರ್‌ರನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡಿಎ ‘ಬೈಲಾ’ದಲ್ಲಿ ಇಬ್ಬರು ಶಾಸಕರಿಗೆ ನಿರ್ದೇಶಕ ಸ್ಥಾನವನ್ನು ಕಲ್ಪಿಸುವ ಅವಕಾಶವಿದೆ. ಆ ನಿಟ್ಟಿನಲ್ಲಿ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಶಾಸಕ ಭೈರತಿ ಬಸವರಾಜು ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್‌ರವರನ್ನು ನೇಮಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಸಚಿವ ಸ್ಥಾನ ಕೈತಪ್ಪಿರುವ ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನ ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ಈಗಾಗಲೆ ಮಾತುಕತೆ ನಡೆಯುತ್ತಿದ್ದು, ಇನ್ನು ಕೆಲವೆ ದಿನಗಳಲ್ಲಿ ಪಟ್ಟಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News