ಪಾಕ್ ವಿರುದ್ಧ ಟೆಸ್ಟ್ ಸರಣಿಗೆ ಆ್ಯಂಡರ್ಸನ್ ಅನುಮಾನ

Update: 2016-06-26 18:26 GMT

ಲಂಡನ್, ಜೂ.25: ಇಂಗ್ಲೆಂಡ್‌ನ ಸಾರ್ವಕಾಲಿಕ ಶ್ರೇಷ್ಠ ಬೌಲರ್ ಜಿಮ್ಮಿ ಆ್ಯಂಡರ್ಸನ್ ಪಾಕಿಸ್ತಾನ ವಿರುದ್ಧದ ಮುಂಬರುವ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳುವುದು ಅನುಮಾನ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಶನಿವಾರ ಘೋಷಿಸಿದೆ.

33ರ ಹರೆಯದ ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟು 454 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ತಿಂಗಳಾರಂಭದಲ್ಲಿ ಶ್ರೀಲಂಕಾ ವಿರುದ್ಧದ ಮೂರನೆ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆ್ಯಂಡರ್ಸನ್‌ಗೆ ಭುಜನೋವು ಕಾಣಿಸಿಕೊಂಡಿತ್ತು.

ಆ್ಯಂಡರ್ಸನ್ ಗಾಯದ ಸಮಸ್ಯೆಯ ಕಾರಣ ಮುಂದಿನ ಎರಡು ಕೌಂಟಿ ಚಾಂಪಿಯನ್‌ಶಿಪ್ ಪಂದ್ಯಗಳಲ್ಲದೆ ಜು.14 ರಿಂದ ಲಾರ್ಡ್ಸ್‌ನಲ್ಲಿ ಆರಂಭವಾಗಲಿರುವ ಪಾಕ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದಲೂ ಹೊರಗುಳಿಯುವ ಸಾಧ್ಯತೆಯಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News