ಹಳ್ಳಿಗಳಿಗೆ ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜೂ. 27: ‘ಹವಾನಿಯಂತ್ರಣ ಕೊಠಡಿಗಳಿಂದ ಹೊರ ಬನ್ನಿ, ಹಳ್ಳಿಗಳಿಗೆ ತೆರಳಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಬಡವರ ಕಣ್ಣೀರು ಒರೆಸುವ ಕೆಲಸ ಮಾಡಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಇಂದಿಲ್ಲಿ ಸಲಹೆ ಮಾಡಿದ್ದಾರೆ.
ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಸಿಇಓಗಳ ಸಮ್ಮೇಳನದಲ್ಲಿ ಮಾತನಾಡಿದ ಅವರು, 19ನೆ ಶತಮಾನದ ಮಧ್ಯಭಾಗದಲ್ಲಿದ್ದ ಅಧಿಕಾರ ಇದೀಗ ಇಲ್ಲದಿದ್ದರೂ, ಜಿಲ್ಲಾಧಿಕಾರಿಗಳ ಹುದ್ದೆ ಅತ್ಯಂತ ಪ್ರಾಮುಖ್ಯತೆ ಹೊಂದಿರುವ ಹುದ್ದೆ. ಜನಸಾಮಾನ್ಯರ ಕುಂದು-ಕೊರೆತೆಗಳಿಗೆ ಸ್ಪಂದಿಸುವುದು ಮಾತ್ರವಲ್ಲ, ಉತ್ತರದಾಯಿತ್ವವೂ ಜಿಲ್ಲಾಧಿಕಾರಿಗಳದ್ದೇ.
ಅಂದಿನ ಕಾಲದಲ್ಲಿ ಅಧಿಕಾರಿಗಳು ಕುದುರೆಯ ಮೇಲೇರಿ ಹಳ್ಳಿ-ಹಳ್ಳಿಗೆ ತೆರಳಿ ತಪಾಸಣೆ ಮಾಡುತ್ತಿದ್ದರು. ಇದೀಗ ಸರಕಾರ ತಮಗೆ ಉತ್ತಮ ವಾಹನಗಳನ್ನು ನೀಡಿದೆ. ಅತ್ಯುತ್ತಮ ಸಂಪರ್ಕ ಸಾಧನಗಳನ್ನು ಒದಗಿಸಿದೆ. ಆದರೂ, ತಹಸೀಲ್ದಾರ್ ಕಚೇರಿಗಳಿಗೆ, ಶಾಲೆಗಳಿಗೆ, ವಸತಿ ನಿಲಯಗಳಿಗೆ ಹಾಗೂ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಧೀನ ಕಚೇರಿಗಳು ಹಾಗೂ ಅಧೀನ ಅಧಿಕಾರಿಗಳು ಹೇಗೆ ಕಾರ್ಯ ನಿರ್ವಸುತ್ತಿದ್ದಾರೆ ಎಂಬುದನ್ನು ಏಕೆ ಪರಿಶೀಲಿಸುತ್ತಿಲ್ಲ? ಇದು ತಮ್ಮ ಕರ್ತವ್ಯವಲ್ಲವೇ? ಎಂದು ಪ್ರಶ್ನಿಸಿದರು. ಅಂದಿನ ಕಾಲದಲ್ಲಿ ಅಧಿಕಾರಿಗಳು ಕುದುರೆಯ ಮೇಲೇರಿ ಹಳ್ಳಿ-ಹಳ್ಳಿಗೆ ತೆರಳಿ ತಪಾಸಣೆ ಮಾಡುತ್ತಿದ್ದರು. ಇದೀಗ ಸರಕಾರ ತಮಗೆ ಉತ್ತಮ ವಾಹನಗಳನ್ನು ನೀಡಿದೆ. ಅತ್ಯುತ್ತಮ ಸಂಪರ್ಕ ಸಾನಗಳನ್ನುಒದಗಿಸಿದೆ.ಆದರೂ,ತಹಸೀಲ್ದಾರ್‌ಕಚೇರಿಗಳಿಗೆ,ಶಾಲೆಗಳಿಗೆ,ವಸತಿನಿಲಯಗಳಿಗೆಹಾಗೂಆಸ್ಪತ್ರೆಗಳಿಗೆೇಟಿ ನೀಡಿ ಅಧೀನ ಕಚೇರಿಗಳು ಹಾಗೂ ಅಧೀನ ಅಧಿಕಾರಿಗಳು ಹೇಗೆ ಕಾರ್ಯ ನಿರ್ವಸುತ್ತಿದ್ದಾರೆ ಎಂಬುದನ್ನು ಏಕೆ ಪರಿಶೀಲಿಸುತ್ತಿಲ್ಲ? ಇದು ತಮ್ಮ ಕರ್ತವ್ಯವಲ್ಲವೇ? ಎಂದು ಪ್ರಶ್ನಿಸಿದರು. ಶಾಲೆಗಳಿಗೆ ಭೇಟಿ ನೀಡಿದಾಗ ಪ್ರತಿನಿತ್ಯ ಉಪಾಧ್ಯಾಯರು ಶಾಲೆಗೆ ಬರುತ್ತಿದ್ದಾರೆಯೇ? ಕೆಲವೆಡೆ ಶಿಕ್ಷಕರು ಶಾಲೆಗಳಿಗೆ ತಾವು ಗೈರು ಹಾಜರಾಗಿ ಬದಲಿ ಶಿಕ್ಷಕರನ್ನು ನೇಮಕ ಮಾಡಿದ್ದಾರೆಂಬ ಆರೋಪಗಳ ವಾಸ್ತವಾಂಶವನ್ನು ಅರಿಯಲು ಸಾಧ್ಯವೇ? ಬಿಸಿಯೂಟ ಹಾಲು ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ? ಹಾಸ್ಟೆಲ್‌ಗಳಲ್ಲಿ ಗುಣಮಟ್ಟದ ಆಹಾರ ನೀಡಲಾಗುತ್ತಿದೆಯೇ? ಸಕಾಲದಲ್ಲಿ ಸಪ್ರಮಾಣದಲ್ಲಿ ಆಹಾರ ಕೊಡಲಾಗುತ್ತಿದೆಯೇ? ಎಂಬುದು ಬೆಳಕಿಗೆ ಬರುತ್ತದೆ ಎಂದು ಸೂಚಿಸಿದರು.
ಸರಕಾರದ ಅವಶ್ಯಕತೆಗಳಿಗೆ ಭೂಮಿಯಿಲ್ಲ:
ಸರಕಾರಿ ಜಮೀನು ಅತಿಕ್ರಮವಾಗಿದ್ದರೆ, ಎಷ್ಟು ಪ್ರಕರಣಗಳಲ್ಲಿ ತೆರವುಗೊಳಿಸಿದ್ದೀರಿ. ತೆರವುಗೊಳಿಸಿದ ಜಮೀನಿನ ರಕ್ಷಣೆಗೆ ಏನು ಕ್ರಮ ಕೈಗೊಂಡಿದ್ದೀರಿ? ಇನ್ನು ಮುಂದೆ ಸರಕಾರಿ ಜಮೀನು ಅತಿಕ್ರಮಣ ಆಗದಂತೆ ಕೈಗೊಳ್ಳಬಹುದಾದ ಕ್ರಮ ಹಾಗೂ ಉಪ ಕ್ರಮಗಳೇನು? ಎಂಬ ಬಗ್ಗೆ ಚಿಂತಿಸಿದ್ದೀರಾ. ನೀವೇ ಆತ್ಮವಿಮರ್ಶೆ ಮಾಡಿಕೊಳ್ಳಿ. ಇನ್ನು ಮುಂದಾದರೂ ಅಂಗನವಾಡಿ, ಆಸ್ಪತ್ರೆ, ಶಾಲೆ, ವಸತಿ ನಿಲಯಗಳಿಗೆ ಹಠಾತ್ ಭೇಟಿ ನೀಡಿ. ದಿನಚರಿ ವರದಿ ಸಲ್ಲಿಸುವ ಪರಿಪಾಠವನ್ನು ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.
ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗಕಲರ ಮಾಸಾಶನ, ಮನಸ್ವಿನಿ ಯೋಜನೆಯ ಮಾಸಾಶನಕ್ಕೆ ಸಂಬಂಧಿಸಿದ ಸಾವಿರಾರು ಅರ್ಜಿಗಳು ಬಾಕಿ ಇದ್ದರೂ ಕ್ರಮ ಜರುಗಿಸದೇ ಇದ್ದರೆ ಹೇಗೆ? ರಾಜ್ಯಾದ್ಯಂತ ಪೋಡಿ ಪ್ರಕರಣಗಳ ಬಾಕಿ ಸಂಖ್ಯೆ ಲಕ್ಷದ ಗಡಿ ದಾಟಿದ್ದರೂ, ಅವುಗಳತ್ತ ಜಿಲ್ಲಾಧಿಕಾರಿಗಳು ಗಮನಹರಿಸಿಲ್ಲ ಏಕೆ?
ಕುಡಿಯುವ ನೀರು ಪೂರೈಕೆಗಾಗಿ ರಾಜ್ಯ ಸರಕಾರ ನಗರಾಭಿವೃದ್ಧಿ ಇಲಾಖೆಗೆ 141 ಕೋಟಿ ರೂ.ಅನುದಾನವನ್ನು ಬಿಡುಗಡೆ ಮಾಡಿದ್ದರೂ, ಕೇವಲ 28 ಕೋಟಿ ರೂ.ಮಾತ್ರ ವೆಚ್ಚವಾಗಿದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಮೈಸೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಬೀದರ್, ಬಳ್ಳಾರಿ, ಬೆಂ.ನಗರ, ಬೆಂ.ಗ್ರಾಮಾಂತರ ಹಾಗೂ ಬಾಗಲಕೋಟೆ ಜಿಲ್ಲೆಗಳಲಿ ವೆಚ್ಚ ಮಾಡಿಲ್ಲ ಎಂದು ದಾಖಲೆಗಳು ಹೇಳುತ್ತವೆ. ಈ ಜಿಲ್ಲೆಗಳಲ್ಲಿ ಕುಡಿಯುವ ನೀರು ಸಮಸ್ಯೆಗಳೇ ಇಲ್ಲವೇ? ಎಂದು ಸಿದ್ದರಾಮಯ್ಯ ಅಚ್ಚರಿ ವ್ಯಕ್ತಪಡಿಸಿದರು. ಕುಡಿಯುವ ನೀರು ಪೂರೈಕೆಗಾಗಿ ರಾಜ್ಯ ಸರಕಾರ ನಗರಾಭಿವೃದ್ಧಿ ಇಲಾಖೆಗೆ 141 ಕೋಟಿ ರೂ.ಅನುದಾನವನ್ನು ಬಿಡುಗಡೆ ಮಾಡಿದ್ದರೂ, ಕೇವಲ 28 ಕೋಟಿ ರೂ.ಮಾತ್ರ ವೆಚ್ಚವಾಗಿದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಮೈಸೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಬೀದರ್, ಬಳ್ಳಾರಿ, ಬೆಂ.ನಗರ, ಬೆಂ.ಗ್ರಾಮಾಂತರ ಹಾಗೂ ಬಾಗಲಕೋಟೆ ಜಿಲ್ಲೆಗಳಲಿ ವೆಚ್ಚ ಮಾಡಿಲ್ಲ ಎಂದು ದಾಖಲೆಗಳು ಹೇಳುತ್ತವೆ. ಈ ಜಿಲ್ಲೆಗಳಲ್ಲಿ ಕುಡಿಯುವ ನೀರು ಸಮಸ್ಯೆಗಳೇ ಇಲ್ಲವೇ? ಎಂದು ಸಿದ್ದರಾಮಯ್ಯ ಅಚ್ಚರಿ ವ್ಯಕ್ತಪಡಿಸಿದರು. ಭೂ ದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕರು ದುಡ್ಡುಕೊಟ್ಟವರ ಕೆಲಸ ಮಾಡಿಕೊಡುತ್ತಾರೆ. ಇಲ್ಲದಿದ್ದರೆ, ಅಲೆದಾಡಿಸುತ್ತಾರೆಂಬ ಮಾತುಗಳು ಕೇಳಿಬರುತ್ತಿವೆ. ಉಪ ನೋಂದಣಾಧಿಕಾರಿಗಳ ಕಚೇರಿಯ ಕಾರ್ಯ ಚಟುವಟಿಕೆಗಳೂ ಇದಕ್ಕಿಂತ ಭಿನ್ನವಿಲ್ಲ. ಲಂಚ ಕೊಡದಿದ್ದರೆ, ಸುರೇಶ ಎಂಬುದಕ್ಕೆ ಬದಲಾಗಿ ಸುರೇಶ್ ಎಂದು ದಾಖಲಿಸಿ, ತಿದ್ದುಪಡಿಗಾಗಿ ಸತಾಯಿಸುತ್ತಾರೆ ಹಾಗೂ ಸುತ್ತಾಡಿಸುತ್ತಾರೆ. ಇಂತಹ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳ ಹಾಗೂ ಇಲಾಖಾ ಮುಖ್ಯಸ್ಥರು ಮಧ್ಯೆ ಪ್ರವೇಶಿಸಿ, ಜನಸಾಮಾನ್ಯರಿಗೆ ನ್ಯಾಯದೊರಕಿಸಿಕೊಡಬೇಡವೇ? ಇಂತಹುದಕ್ಕೆ ತಮ್ಮ ಆತ್ಮಸಾಕ್ಷಿ ಸ್ಪಂದಿಸುವುದಿಲ್ಲವೇ? ಜನಸಾಮಾನ್ಯರ ಬಳಿ ಗ್ರಾಮ ಲೆಕ್ಕಿಗರು ಹಾಗೂ ಕಂದಾಯ ನಿರೀಕ್ಷಕರು ಹೇಗೆ ವರ್ತಿಸುತ್ತಾರೆ ಎಂಬುದರ ಬಗ್ಗೆ ತಮಗೆ ಅರಿವಿದೆಯೇ? ಎಂದು ಸಿದ್ದರಾಮಯ್ಯ ಅಧಿಕಾರಿಗಳನ್ನು ಛೇಡಿಸಿದರು.