ಸೊರಬ ತಾಲೂಕ್ ಪಂಚಾಯತ್ ಜೆಡಿಎಸ್ ತೆಕ್ಕೆಗೆ

Update: 2016-06-28 06:40 GMT

ಶಿವಮೊಗ್ಗ, ಜೂ.28: ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಬಹುಮತ ಪಡೆದ ಜೆಡಿಎಸ್ ಅಧಿಕಾರದ ಗದ್ದುಗೆ ಏರಿದೆ.

 ಜೂ.26 ರಂದು ನಡೆದಿದ್ದ ತಾಲೂಕು ಪಂಚಾಯತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮಂಗಳವಾರ ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. 19 ಸದಸ್ಯ ಬಲದ ತಾಲೂಕು ಪಂಚಾಯತ್‌ನಲ್ಲಿ ಜೆಡಿಎಸ್ 11 ಸ್ಥಾನಗಳನ್ನು ಪಡೆದು ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಈ ಮೂಲಕ ಶಾಸಕ ಮಧು ಬಂಗಾರಪ್ಪ ಕ್ಷೇತ್ರದಲ್ಲಿ ತನ್ನ ಪ್ರಾಬಲ್ಯ ಉಳಿಸಿಕೊಂಡಿದ್ದಾರೆ.

ಬಿಜೆಪಿ 5 ಹಾಗೂ ಕಾಂಗ್ರೆಸ್ 3 ಸ್ಥಾನ ಗಳಿಸಿವೆ. ಈ ಫಲಿತಾಂಶದಿಂದ ಕಾಂಗ್ರೆಸ್‌ನ ಕುಮಾರ ಬಂಗಾರಪ್ಪ ಹಾಗೂ ಬಿಜೆಪಿಯ ಹರತಾಳು ಹಾಲಪ್ಪ ಮುಖಭಂಗ ಅನುಭವಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News