ನರೇಶ್ ಶೆಣೈ ಮಂಪರು ಪರೀಕ್ಷೆಗೆ ಅನುಮತಿ ನೀಡುವಂತೆ ಪೊಲೀಸರಿಂದ ಕೋರ್ಟ್‌ಗೆ ಅರ್ಜಿ
Update: 2016-06-28 21:13 IST
ಮಂಗಳೂರು, ಜೂ.28: ಆರ್ ಟಿ ಐ ಕಾರ್ಯಕರ್ತ ವಿನಾಯಕ್ ಬಾಳಿಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಲ್ಲಿರುವ ನಮೋಬ್ರಿಗೇಡ್ ಮುಖಂಡ ನರೇಶ್ ಶೆಣೈ ಮಂಪರು ಪರೀಕ್ಷೆ ನಡೆಸಲು ಅನುಮತಿ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ನರೇಶ್ ಶೆಣೈ ಬಂಧನ ಬಳಿಕ ಆತನಿಂದ ಪ್ರಕರಣದ ವಿಚಾರಣೆಗಾಗಿ ಸಾಕಷ್ಟು ಮಾಹಿತಿ ಸಂಗ್ರಹಿಸಬೇಕಾಗಿರುವುದರಿಂದ ಪೊಲೀಸರು ನರೇಶ್ ಶೆಣೈಯ ಮಂಪರು ಪರೀಕ್ಷೆ ಅಗತ್ಯ ಎಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಈ ಬಗ್ಗೆ ನ್ಯಾಯಾಲಯವು ಇನ್ನಷ್ಟೆ ವಿಚಾರಣೆಯನ್ನು ಕೈಗೆತ್ತಿಕೊಳ್ಳಬೇಕಾಗಿದೆ.