ಅಪಾಯದಂಚಿನ ಶಾಲೆಗೆ ಅಧಿಕಾರಿಗಳ ದೌಡು
ಶಿವಮೊಗ್ಗ, ಜೂ. 28: ಅಪಾಯದ ಸ್ಥಿತಿಯಲ್ಲಿದ್ದ ನಗರದ ಹೊರವಲಯ ಸೋಮಿನಕೊಪ್ಪಬಡಾವವಣೆಯ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗ (ಪಿ.ಆರ್.ಡಿ.)ದ ಅಧಿಕಾರಿಗಳ ತಂಡ ಭೇಟಿನೀಡಿ ಶಾಲಾ ಕಟ್ಟಡ ಪರಿಶೀಲನೆ ನಡೆಸಿತು.
ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಬಿ.ಇ.ಒ. ಹಾಲಾನಾಯ್ಕ, ‘ಸೋಮಿನಕೊಪ್ಪಸರಕಾರಿ ಉರ್ದು ಶಾಲೆಯ ಕೆಲ ಕೊಠಡಿಗಳ ಮೇಲ್ಛಾವಣಿ ಅಪಾಯಕಾರಿ ಸ್ಥಿತಿಯಲ್ಲಿದೆೆ. ಈ ಹಿನ್ನೆಲೆಯಲ್ಲಿ ಅಪಾಯದಲ್ಲಿರುವ ಕೊಠಡಿಗಳಲ್ಲಿ ಮಕ್ಕಳಿಗೆ ಪಾಠ-ಪ್ರವಚನ ನಡೆಸದಂತೆ ಶಿಕ್ಷಕರಿಗೆ ತಿಳಿಸಲಾಗಿದ್ದು, ಪರ್ಯಾಯ ವ್ಯವಸ್ಥೆಗೆ ಕ್ರಮಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಸದ್ಯ ಶಾಲೆಯ ತಾತ್ಕಾಲಿಕ ದುರಸ್ತಿಗಾಗಿ 5 ಲಕ್ಷ ರೂ. ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಹೆಂಚಿನ ಮೇಲ್ಛಾವಣಿ ಬದಲಿಸಿ ಸ್ಟೀಲ್‌ನ ಮೇಲ್ಛಾವಣಿ ಅಳವಡಿಸಲು ನಿರ್ಧರಿಸಲಾಗಿದೆ.ಬಳಿಕ ಹಳೆಯ ಕಟ್ಟಡವನ್ನು ಸಂಪೂರ್ಣ ತೆರವುಗೊಳಿಸಿ, ನೂತನ ಉರ್ದುಶಾಲಾ ಕಟ್ಟಡ ನಿರ್ಮಾಣಕ್ಕೆ ಅನುಮತಿ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗದ ಎ.ಇ.ಇ. ವೀರಣ್ಣರವರು ಸುದ್ದಿಗಾರರೊಂದಿಗೆ ಮಾತನಾಡಿ, ಹಲವು ದಶಕಗಳ ಹಿಂದೆ ಈ ಶಾಲೆಯ ಕಟ್ಟಡ ನಿರ್ಮಾಣ ಮಾಡಲಾಗಿದೆ. ಇದು ಪ್ರಸ್ತುತ ಶಿಥಿಲಾವಸ್ಥೆಯಲ್ಲಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ. ಈ ಕಟ್ಟಡವನ್ನು ಪೂರ್ಣವಾಗಿ ತೆರವುಗೊಳಿಸುವುದು ಅನಿವಾರ್ಯವಾಗಿದೆ ಎಂದು ಹಿರಿಯ ಅಧಿಕಾರಿಗಳಿಗೆ ಸಮಗ್ರ ವರದಿ ಸಿದ್ಧಪಡಿಸಿ ಸಲ್ಲಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಬಿದ್ದಿದ್ದ ಹೆಂಚುಗಳು: ಸೋಮಿನಕೊಪ್ಪ ಸರಕಾರಿ ಉರ್ದು ಶಾಲೆ ಅಪಾಯಕಾರಿ ಸ್ಥಿತಿಯಲ್ಲಿದ್ದು, ಮುನ್ನೆಶಿವಮೊಗ್ಗ: ಸರಕಾರಿ ಶಾಲೆಗೆ ಕಾಯಕಲ್ಪದ ಸಡಗರಾಖೆ ಹಾಗೂ ಅಧಿಕಾರಿಗಳ ವಿರುದ್ಧ ಪೋಷಕರು ಅಸಮಾದಾನ ವ್ಯಕ್ತ ಪಡಿಸಿದ್ದರು.
ಈ ನಡುವೆ ಶಾಲಾ ಅವಧಿಯಲ್ಲಿ ಮಕ್ಕಳು ಹೊರಭಾಗದಲ್ಲಿ ಆಟವಾಡುತ್ತಿದಾಗ ಮೇಲ್ಛಾವಣಿಯಿಂದ ಹೆಂಚುಗಳು ಬಿದ್ದಿದ್ದು, ಸಂಭವಿಸ ಬಹುದಾಗಿದ್ದ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿತ್ತು. ಈ ಘಟನೆಯಿಂದ ಪೋಷಕರು ಹಾಗೂ ಶಿಕ್ಷಕ ವರ್ಗ ತೀವ್ರ ಆತಂಕಗೊಂಡಿದ್ದರು.
ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ದುರಸ್ತಿಗೆ ಅಗತ್ಯ ಕ್ರಮಕೈಗೊಳ್ಳುವಂತೆ ಪೋಷಕರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದರು. ಬೀದಿಗಿಳಿದು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದರು. ಈ ಘಟನೆಯಿಂದ ಎಚ್ಚೆತ್ತುಕೊಂಡಿರುವ ಅಧಿಕಾರಿ ವರ್ಗವೀಗ ಶಾಲೆಗೆ ಖುದ್ದು ಭೇಟಿನೀಡಿ ಪರಿಶೀಲನೆ ನಡೆಸಿ, ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದೆ.
ಕ್ಷೇತ್ರ ಶಿಕ್ಷಣಾಧಿಕಾರಿ (ಬಿ.ಇ.ಒ.) ಹಾಲಾನಾಯ್ಕ, ಪಿ.ಆರ್.ಡಿ.ಯ ಸಹಾಯಕ ಕಾರ್ಯಪಾಲಕ ಅಭಿಯಂತರ ವೀರಣ್ಣ, ಸಹಾಯಕ ಅಭಿಯಂತರ ಮಂಜುನಾಥ್ ರವರು ಭೇಟಿಯಿತ್ತು ಪರಿಶೀಲಿಸಿದರು. ಈ ಸಂದರ್ದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಮುಕ್ತಿಯಾರ್ ಸೇರಿದಂತೆ ಶಾಲಾಭಿವೃದ್ದಿ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು. ಇಲ್ಲೇ ಮಕ್ಕಳ ಪಾಠ ಪ್ರವಚನ: ಪ್ರಸ್ತುತ ಕಟ್ಟಡವು ಶಿಥಿಲಾವಸ್ಥೆಗೆ ತಲುಪಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ. ಈಗಾಗಲೇ ಮೂರ್ನಾಲ್ಕು ಕೊಠಡಿಗಳ ಮೇಲ್ಛಾವಣಿ ಕಿತ್ತು ಹೋಗಿದ್ದು, ಮಳೆ ನೀರು ಕೊಠಡಿಯೊಳಗೆ ಬೀಳುತ್ತಿದೆ. ಉಳಿದ ಕೊಠಡಿಗಳು ಕೂಡ ಅಪಾಯಕಾರಿ ಸ್ಥಿತಿಯಲ್ಲಿವೆ. ಈ ಕೊಠಡಿಗಳಲ್ಲಿಯೇ ಮಕ್ಕಳಿಗೆ ಪಾಠ ಹೇಳಿಕೊಡಲಾಗುತ್ತಿದೆ.
ನೆಲಸಮಗೊಳಿಸದಿದ್ದರೆ ಅಪಾಯ ನಿಶ್ಚಿತ..!!: ಸರಿಸುಮಾರು 50 ವರ್ಷಗಳ ಹಿಂದೆ ಈ ಶಾಲೆಯ ಕಟ್ಟಡ ನಿರ್ಮಾಣ ಮಾಡಲಾಗಿದೆ. ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗ (ಪಿ.ಆರ್.ಡಿ.)ದ ಇಂಜಿನಿಯರ್ ಈ ಶಾಲೆಯ ಕಟ್ಟಡ ಅಪಾಯಕಾರಿ ಸ್ಥಿತಿಯ ಲ್ಲಿದೆ. ತಕ್ಷಣವೇ ಎಚ್ಚೆತ್ತುಕೊಂಡು ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ನೆಲಸಮಗೊಳಿಸಿ, ಹೊಸ ಕಟ್ಟಡ ನಿರ್ಮಾಣ ಮಾಡುವುದೊಂದೇ ಪರಿಹಾರ ಎಂದು ಅಭಿಪ್ರಾಯಪಟಿ್ಟದ್ದಾರೆ.
ದುರಸ್ತಿಯಲ್ಲಿರುವ ಕೊಠಡಿಗಳ ಮೇಲ್ಛಾವಣಿ ತೆರವುಗೊಳಿಸಿ ಹೊಸದಾಗಿ ಸ್ಟೀಲ್ ಮೇಲ್ಛಾವಣಿ ಅಳವಡಿಸಲು ತುರ್ತು ದುರಸ್ತಿ ಕಾರ್ಯಕ್ಕಾಗಿ 5 ಲಕ್ಷ ರೂ. ಬಿಡುಗಡೆ ಮಾಡಲಾಗುತ್ತಿದೆ. ಅಲ್ಲಿಯವರೆಗೂ ಅಪಾಯಕಾರಿ ಸ್ಥಿತಿಯಲ್ಲಿರುವ ಕೊಠಡಿಗಳಲ್ಲಿ ಮಕ್ಕಳ ಪಾಠ-ಪ್ರವಚನ ನಡೆಸದಂತೆ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ದುರಸ್ತಿಯಲ್ಲಿರುವ ಕೊಠಡಿಗಳ ಬಳಿ ಮಕ್ಕಳು ತೆರಳದಂತೆ ನಿಗಾವಹಿಸುವಂತೆ ಶಿಕ್ಷಕರಿಗೆ ಸಲಹೆ ಕೊಡಲಾಗಿದೆ. ಹಳೆಯ ಕಟ್ಟಡವನ್ನು ಸಂಪೂರ್ಣವಾಗಿ ತೆರವುಗೊಳಿಸಿ, ಹೊಸ ಕಟ್ಟಡ ನಿರ್ಮಾಣ ಮಾಡಲು ಅನುಮತಿ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಶಾಲೆಯ ಸ್ಥಿತಿಗತಿಯ ಬಗ್ಗೆ ವರದಿ ಸಿದ್ಧಪಡಿಸಿ ಹಿರಿಯ ಅಧಿಕಾರಿಗಳಿಗೆ ಸಲ್ಲಿಸಲಾಗುವುದು.
< ಹಾಲಾನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ
ಸರಕಾರಿ ಶಾಲೆಗೆ ಕಾಯಕಲ್ಪದ ಸಡಗರ
ವರದಿಗೆ ಕರ್ತವ್ಯ ಅರಿತ ಅಧಿಕಾರಿ ವರ್ಗ
ಪೋಷಕರು, ವಿದ್ಯಾರ್ಥಿಗಳಲ್ಲಿ ಹರ್ಷ