ನಾಯಕತ್ವ ಬದಲಾವಣೆಗಾಗಿ ‘ಕೈ’ ಅತೃಪ್ತರ ಪಟ್ಟು
ಬೆಂಗಳೂರು, ಜೂ. 28: ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಡಿದ್ದೆದ್ದಿರುವ ಅತೃಪ್ತ ಶಾಸಕರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಮಂಗಳವಾರ ಇಲ್ಲಿನ ಸದಾಶಿವ ನಗರದಲ್ಲಿರುವ ಕೃಷ್ಣ ನಿವಾಸಕ್ಕೆ ತೆರಳಿದ ಮಾಜಿ ಸಚಿವ ಖಮರುಲ್ ಇಸ್ಲಾಮ್, ಹಿರಿಯ ಶಾಸಕ ಮಾಲಕರೆಡ್ಡಿ ಸಿಎಂ ಸಿದ್ದರಾಮಯ್ಯ ಹಾಗೂ ಲೋಕಸಭೆ ಕಾಂಗ್ರೆಸ್ ಪಕ್ಷದ ನಾಯಕ ಖರ್ಗೆಯವರ ನಡವಳಿಕೆಗಳು ಹಾಗೂ ಪಕ್ಷದಲ್ಲಿನ ಪ್ರಸಕ್ತ ಬೆಳವಣಿಗೆಗಳನ್ನು ಕೃಷ್ಣರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಗೊತ್ತಾಗಿದೆ.
ರಮಾಝಾನ್ ಬಳಿಕ ದಿಲ್ಲಿಗೆ: ‘ತಾಳ್ಮೆಯಿಂದಿರಿ, ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ರಮಝಾನ್ ಹಬ್ಬದ ಬಳಿಕ ಹೊಸದಿಲ್ಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡೋಣ’ ಎಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ತಮಗೆ ತಿಳಿಸಿದ್ದಾರೆಂದು ಖಮರುಲ್ ಇಸ್ಲಾಮ್ ಹೇಳಿದ್ದಾರೆ.ೃಷ್ಣ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಯಾವುದೇ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ’ ಎಂದು ಹೇಳಿದ್ದಾರೆ ಎಂದು ಅವರು ತಿಳಿಸಿದರು.
ತಾನು 1999ರಲ್ಲಿ ಎಸ್.ಎಂ.ಕೃಷ್ಣ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂದೆ. ಕಾಂಗ್ರೆಸ್ ಪಕ್ಷ ವಿಶಾಲವಾದ ವೇದಿಕೆ. ಗುಲಾಂ ನಬಿ ಆಝಾದ್ ಮತ್ತು ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿ ನಾನು ಈ ಪಕ್ಷದಲ್ಲಿ ಮೂರು ಬಾರಿ ಸಚಿವ ನಾಗಿದ್ದೇನೆ. ಆದರೆ, ನನ್ನನ್ನು ಏಕಾಏಕಿ ಸಚಿವ ಹುದ್ದೆಯಿಂದ ತೆಗೆದು ಲ್ಪಸಂಖ್ಯಾತ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಖಮರುಲ್ ಇಸ್ಲಾಮ್ ಆಕ್ರೋಶ ವ್ಯಕ್ತಪಡಿಸಿದರು.