×
Ad

ಸಜಿಪನಡು: ಡಂಪಿಂಗ್ ಯಾರ್ಡ್ ಗೆ ಕೋಟ ಶ್ರೀನಿವಾಸ್ ಪೂಜಾರಿ ಭೇಟಿ

Update: 2016-06-29 13:08 IST

ಬಂಟ್ವಾಳ, ಜೂ. 29: ತಾಲೂಕಿನ ಸಜಿಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿ ಬಂಟ್ವಾಳ ಪುರಸಭೆಯಿಂದ ನಿರ್ಮಾಣ ಹಂತದಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಜಿಪನಡು ಗ್ರಾಮ ಪಂಚಾಯತ್ ಅಧ್ಯಕ್ಷ ಮುಹಮ್ಮದ್ ನಾಸೀರ್ ಅವೈಜ್ಞಾನಿಕ ಘನ ತ್ಯಾಜ್ಯ ಘಟಕ ನಿರ್ಮಾಣದಿಂದ ಪರಿಸರದಲ್ಲಿ ಉಂಟಾಗಬಹುದಾದ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಘನ ತ್ಯಾಜ್ಯ ಘಟಕದ ಪಕ್ಕದಲ್ಲಿರುವ ಶಾಲೆ, ಅಂಗನವಾಡಿ, ನೂರಕ್ಕೂ ಅಧಿಕ ಸಂಖ್ಯೆಯಲ್ಲಿರುವ ವಾಸವಿರುವ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ ಬಳಿಕವೇ ಘಟಕದಲ್ಲಿ ಕೆಲಸ ಕಾರ್ಯ ಆರಂಭಿಸಲು ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.

ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕೇಳಿದ ಬಳಿಕ ಪ್ರತಿಕ್ರಿಯಿಸಿದ ಕೋಟ ಶ್ರೀನಿವಾಸ್ ಪೂಜಾರಿ, ಈ ಬಗ್ಗೆ ವಿಧಾನ ಪರಿಷತ್ ನಲ್ಲಿ ಚರ್ಚಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೀರಪ್ಪ ಗೌಡ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News