×
Ad

ಕೊಂಕಣಿ ಭವನಕ್ಕೆ ಆಗ್ರಹಿಸಿ ಮೇಯರ್‌ಗೆ ಮನವಿ

Update: 2016-06-29 13:36 IST

ಮಂಗಳೂರು,ಜೂ.29: ಕೊಂಕಣಿ ಭವನವನ್ನು ಒದಗಿಸಬೇಕೆಂದು ಆಗ್ರಹಿಸಿ ಕೊಂಕಣಿ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಕೊಂಕಣಿ ಸಮುದಾಯದ ಪ್ರಮುಖರು ಇಂದು ಮೇಯರ್ ಹರಿನಾಥ್‌ಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

ಮೇಯರ್ ಕೊಠಡಿಗೆ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಾಯ್ ಕ್ಯಾಸ್ತಲಿನೊ ನೇತೃತ್ವದ ನಿಯೋಗವೊಂದು ತೆರಳಿ ಮನವಿಯನ್ನು ಸಲ್ಲಿಸಿತು.

ಕಳೆದ ಎರಡು ವರ್ಷಗಳಿಂದ ಅಕಾಡೆಮಿಯು ಕೊಂಕಣಿ ಭವನ ನಿರ್ಮಾಣಕ್ಕೆ ಪ್ರಯತ್ನಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕಳೆದ ಜುಲೈನಲ್ಲಿಯೂ ಮನವಿ ಸಲ್ಲಿಸಲಾಗಿದ್ದರೂ ಮನಪಾದಿಂದ ಯಾವುದೇ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ ಎಂದು ಅಕಾಡೆಮಿ ಅಧ್ಯಕ್ಷ ರಾಯ್ ಕ್ಯಾಸ್ತಲಿನೊ ಮೇಯರ್‌ರೆದುರು ಬೇಸರ ವ್ಯಕ್ತಪಡಿಸಿದರು.
ಮನವಿ ಸ್ವೀಕರಿಸಿದ ಮೇಯರ್ ಹರಿನಾಥ್, ಕೊಂಕಣಿ ಭವನಕ್ಕೆ ಜಾಗ ಒದಗಿಸುವ ಬಗ್ಗೆ ತಾವು ಪ್ರಯತ್ನಿಸುವುದಾಗಿ ಹೇಳಿದರು.

ಕೊಂಕಣಿ ಸಮುದಾಯದ ಹಿರಿಯ ನಾಯಕರಾದ ಬಸ್ತಿ ವಾಮಾನ ಶೆಣೈ ಮಾತನಾಡಿ, ಕೊಂಕಣಿ ಅಕಾಡೆಮಿಗೆ ತನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಭವನ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮೇಯರ್‌ಗೆ ಮನವಿ ಸಲ್ಲಿಸಿದ್ದು, ಪೂರಕ ಸ್ಪಂದನೆ ದೊರಕಿದೆ ಎಂದು ಹೇಳಿದರು.

ಈ ಸಂದರ್ಭ ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಕೊಂಕಣಿ ಅಕಾಡೆಮಿಯ ಸದಸ್ಯರು ಹಾಗೂ ಸಮುದಾಯದ ನಾಯಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News