ವಾಮಂಜೂರು: ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನೆ
ವಾಮಂಜೂರು, ಜೂ.29: ಇಲ್ಲಿನ ಸೈಂಟ್‌ರೇಮಂಡ್ಸ್ ಪದವಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಪುತ್ತೂರಿನ ಪ್ರತಿಷ್ಠಿತ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಿಭಾಗದ ಉಪನ್ಯಾಸಕ ಹರಿಪ್ರಸಾದ್ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆ ಜೀವನದ ಮೌಲ್ಯಗಳನ್ನು ತಿಳಿಸಿಕೊಡುವುದರ ಜೊತೆಗೆ ಸಮಾಜಮುಖಿ ಬದುಕನ್ನುರೂಪಿಸಲು ಸಹಕರಿಸುತ್ತದೆಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ವಂದನೀಯ ಭಗಿನಿ.ಸಾಧನರವರು ವಹಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಬದುಕಿನಲ್ಲಿ ಸಾಮಾಜಿಕ ಕಳಕಳಿಯನ್ನು ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದರು. ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿಗಳಾದ ಶ್ರೀ ದಿನಕರ್ ಅಂಚನ್, ಶ್ರೀ ಜಯರಾಮ್ ಮತ್ತು ಕು.ವಿಲ್ಮಾ ಹಾಗೂ ಎಲ್ಲಾ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿಕೊಟ್ಟರು.