×
Ad

ಅಂತಾರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ ವಿಜೇತ ವಿಕಾಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ

Update: 2016-06-29 18:22 IST

ಮಂಗಳೂರು, ಜೂ.29: ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದ ವಿಕಾಸ್ ಕಾಲೇಜಿನ ವಿದ್ಯಾರ್ಥಿಗಳಾದ ಶಿವನಗೌಡ ಬಿ. ಮತ್ತು ಕುಸುಮಾರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅಂತರಾಷ್ಟ್ರೀಯ ಯೋಗ ತೀರ್ಪುಗಾರ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ, ಉತ್ತಮ ಮನುಷ್ಯರಾಗಲು ಯೋಗ ಒಂದು ಕೀಲಿಕೈ ಇದ್ದ ಹಾಗೆ. ವಿಕಾಸ್ ಕಾಲೇಜಿನಲ್ಲಿ ನಾನೂ ಒಂದು ಭಾಗವಾಗಿದ್ದೇನೆ ಎನ್ನುವುದು ಸಂತೋಷದ ವಿಷಯ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಕಾಲೇಜಿನ ಸ್ಥಾಪಕಾಧ್ಯಕ್ಷ, ಮಾಜಿ ಸಚಿವ ಜೆ.ಕೃಷ್ಣ ಪಾಲೆಮಾರ್ ಅಧ್ಯಕ್ಷತೆ ವಹಿಸಿದ್ದರು. ಸಲಹೆಗಾರರಾದ ಡಾ. ಅನಂತ್‌ಪ್ರಭು ಜಿ., ಉಪಪ್ರಾಂಶುಪಾಲೆ ಮೋಹನಾ ಆರ್. ಉಪಸ್ಥಿತರಿದ್ದರು. ಉಪನ್ಯಾಸಕ ಲಕ್ಷ್ಮೀಶ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News