ಕಾರು-ಟೆಂಪೋ ಮಧ್ಯೆ ಢಿಕ್ಕಿ: ಇಬ್ಬರಿಗೆ ಗಾಯ

Update: 2016-06-29 14:36 GMT

ಮಂಗಳೂರು, ಜೂ.29: ನಗರದ ಲಾಲ್‌ಭಾಗ್ ಬಳಿ ಕಾರು ಮತ್ತು ಟೆಂಪೋ ನಡುವೆ ಢಿಕ್ಕಿ ಸಂಭವಿಸಿ ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ.

ಇಂದು ಸಂಜೆ 5 ಗಂಟೆಯ ಸುಮಾರಿಗೆ ಲಾಲ್‌ಭಾಗ್‌ನಿಂದ ಲೇಡಿಹಿಲ್‌ಗೆ ಹೋಗುವ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News