ಕೊಡಗಿನಲ್ಲಿ ವರುಣನ ಆರ್ಭಟ..!
Update: 2016-06-30 00:24 IST
ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮ ವ್ಯಾಪ್ತಿಯ ರಸ್ತೆಗಳು ಹಾಗೂ ಗದ್ದೆಗಳು ಜಲಾವೃತಗೊಂಡಿವೆ. ದಕ್ಷಿಣ ಕೊಡಗಿನಲ್ಲೂ ಭಾರೀ ಮಳೆಯಾಗುತ್ತಿದ್ದು, ಸೇತುವೆಗಳು ಹಾಗೂ ರಸ್ತೆಗಳು ನೀರಿನಲ್ಲಿ ಮುಳುಗಿವೆ.