ಬಿ.ಸಿ.ರೋಡ್: ಸಚಿವ ರಮಾನಾಥ್ ರೈ ನೇತೃತ್ವದಲ್ಲಿ ಇಫ್ತಾರ್ ಕೂಟ
Update: 2016-06-30 21:30 IST
ಬಂಟ್ವಾಳ, ಜೂ.30: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ರಮಝಾನ್ ಉಪವಾಸದ ಇಫ್ತಾರ್‌ಕೂಟ ಗುರುವಾರ ಸಂಜೆ ಬಿ.ಸಿ.ರೋಡಿನ ಅಲ್ ಖಝಾನಾ ಸಮುದಾಯ ಭವನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮುಡಾ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮಂಗಳೂರು ಮಹಾ ನಗರ ಪಾಲಿಕೆ ಮೇಯರ್ ಹರಿನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಸಹಿತ ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಪಂ ಸದಸ್ಯರು ಉಪಸ್ಥಿತರಿದ್ದರು.