×
Ad

‘ಶ್ರೀಕೃಷ್ಣ ಯಕ್ಷ ಅಷ್ಟಾಹ’ ಉದ್ಘಾಟನೆ

Update: 2016-06-30 23:57 IST

ಉಡುಪಿ, ಜೂ.30: ಪರ್ಯಾಯ ಶ್ರೀಪೇಜಾವರ ಅಧೋಕ್ಷಜ ಮಠದ ಆಶ್ರಯದಲ್ಲಿ ಧಾರೇಶ್ವರ ಯಕ್ಷ ಬಳಗ ಚಾರಿಟೇಬಲ್ ಟ್ರಸ್ಟ್ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಿರುವ ‘ಶ್ರೀಕೃಷ್ಣ ಯಕ್ಷ ಅಷ್ಟಾಹ’ ಇಂದು ಉದ್ಘಾಟನೆಗೊಂಡಿತು.
ಅಷ್ಟಾಹವನ್ನು ಉದ್ಘಾಟಿಸಿ ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಶುಭ ಹಾರೈಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಮಂಗಳೂರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್‌ಕುಮಾರ್ ಕಲ್ಕೂರ, ಉದ್ಯಮಿ ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿದರು.
ಕಿರಿಮಂಜೇಶ್ವರ ಧಾರೇಶ್ವರ ಯಕ್ಷಬಳಗ ಚಾರಿಟೇ ಬಲ್ ಟ್ರಸ್ಟ್‌ನ ಅಧ್ಯಕ್ಷ ಖ್ಯಾತ ಯಕ್ಷ ಕಲಾವಿದ ಸುಬ್ರಹ್ಮಣ್ಯ ಧಾರೇಶ್ವರ ಸ್ವಾಗತಿಸಿದರು. ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ಕೃಷ್ಣ ಜನ್ಮ- ಕಾಳಿಂಗ ಪ್ರಸಂಗ’ ಯಕ್ಷಗಾನ ಪ್ರದರ್ಶನ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News