ರಸ್ತೆಗೆ ಬಿದ್ದ ಬೃಹತ್ ಮರ: ಸಂಚಾರ ಅಸ್ತವ್ಯಸ್ತ

Update: 2016-06-30 18:27 GMT

ಬಂಟ್ವಾಳ, ಜೂ. 30: ಮೂಡುಬಿದಿರೆ ರಸ್ತೆಯ ಮಾಡಮ್ಮೆ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದಿರುವುದರಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು. ಈ ಸಂದರ್ಭ ದಲ್ಲಿ ದ್ವಿಚಕ್ರವಾಹನದಲ್ಲಿ ಸಂಚರಿಸುತ್ತಿದ್ದ ಮಹಿಳೆಯೊಬ್ಬರು ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ. ರಸ್ತೆಗೆ ಮರ ಅಡ್ಡವಾಗಿ ಬಿದ್ದ ಪರಿಣಾಮ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಎಲ್ಲ ವಾಹನಗಳಿಗೆ ಸಿದ್ಧಕಟ್ಟೆ- ಕರ್ಪೆ ಮಾರ್ಗವಾಗಿ ಸಂಚಾರಕ್ಕೆ ಅನುವು ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News