ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸಂಜೀವ ಮಠಂದೂರು ಪದಗ್ರಹಣ

Update: 2016-07-02 10:14 GMT

ಮಂಗಳೂರು, ಜು.2: ದ.ಕ.ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಸಂಜೀವ ಮಠಂದೂರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇಂದು ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸದ ನಳಿನ್ ಕುಮಾರ್ ಕಟೀಲು, ನೂತನ ತಂಡಕ್ಕೆ ಶುಭ ಹಾರೈಸಿದರು. ಮುಂದಿನ 2 ವರ್ಷಗಳಲ್ಲಿ ಎದುರಾಗುವ ವಿಧಾನ ಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಎಂಟೂ ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ದೇಶದಲ್ಲಿ ಪರಿವರ್ತನೆ ಗಾಳಿ ಬೀಸುತ್ತಿದೆ. 5 ವರ್ಷಗಳಲ್ಲಿ ಭಾರತ ಕಾಂಗ್ರೆಸ್ ಮುಕ್ತವಾಗಲಿದೆ ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಐಸಿಯು ಪ್ರವೇಶಿಸಿದ್ದು, ಯಾವಾಗ ಕೋಮಾಕ್ಕೆ ಪ್ರವೇಶಿಸಲಿದೆ ಎಂದು ಹೇಳಲಾಗದು. ಈ ಕಾರಣ ದಿಂದ ಮುಂದಿನ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಪಕ್ಷವನ್ನು ಕಟ್ಟುವ ಕೆಲಸವನ್ನು ನೂತನ ತಂಡ ಮಾಡಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪ ಮೇಯರ್ ಸುಮಿತ್ರಾ ಕೆ. ಉಪಸ್ಥಿತರಿದ್ದರು.

ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಸ್ವಾಗತಿಸಿದರು. ನಿರ್ಗಮನ ಅಧ್ಯಕ್ಷ ಪ್ರತಾಪ್ ಸಿಂಹ ನಾಯಕ್ ಅಧ್ಯಕ್ಷತೆ ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News