ನಿವೃತ್ತ ಪೊಲೀಸ್ ಹೆಡ್‌ಕಾನ್‌ಸ್ಟೇಬಲ್ ಮುಹಮ್ಮದ್ ನಿಧನ
Update: 2016-07-02 17:11 IST
ಮಂಗಳೂರು, ಜು.2: ಪುತ್ತೂರು ಪರ್ಲಡ್ಕ ನಿವಾಸಿ ನಿವೃತ್ತ ಪೊಲೀಸ್ ಹೆಡ್‌ಕಾನ್‌ಸ್ಟೇಬಲ್ ಮುಹಮ್ಮದ್ (58) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಶನಿವಾರ ಮಧ್ಯಾಹ್ನ ನಿಧನರಾದರು. ಅವರು ಬಂಟ್ವಾಳ ನಗರ, ಪುತ್ತೂರು ಗ್ರಾಮಾಂತರ, ಕಡಬ ಪೊಲೀಸ್ ಠಾಣೆ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದರು.ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.