×
Ad

ಶುದ್ಧ ಕುಡಿಯುವ ನೀರು ಒದಗಿಸುವುದು ಪುಣ್ಯದ ಕೆಲಸ

Update: 2016-07-02 23:09 IST

ಮಡಿಕೇರಿ, ಜು.2: ರೋಟರಿ ಮಿಸ್ಟ್‌ಹಿಲ್ಸ್ ಮತ್ತು ಮುಳಿಯ ಟ್ರಸ್ಟ್ ವತಿಯಿಂದ ನಗರದ ಓಂಕಾರೇಶ್ವರ ದೇವಸ್ಥಾನ ಬಳಿ ಸುಮಾರು 35 ಸಾವಿರ ರೂ. ವೆಚ್ಚದಲ್ಲಿ ನೂತನವಾಗಿ ಅಳವಡಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಸಾರ್ವಜನಿಕರಿಗೆ ಸಮರ್ಪಿಸಿದರು. ನಂತರ ಮಾತನಾಡಿದ ಅವರು, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಪುಣ್ಯದ ಕೆಲಸವಾಗಿದೆ. ಕುಡಿಯುವ ನೀರು ಒದಗಿಸುವುದು ಸೇರಿದಂತೆ ನಾನಾ ರೀತಿಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದು ಉತ್ತಮ ಕಾರ್ಯಗಳಾಗಿದೆ ಎಂದು ಶ್ಲಾಘಿಸಿದರು. ಇಂತಹ ಸಮಾಜ ಕಾರ್ಯಗಳಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ನಿಸ್ವಾರ್ಥ ಸೇವೆಗೆ ರೋಟರಿ ಹೆಸರುವಾಸಿಯಾಗಿದೆ ಎಂದು ಸಚಿವರು ಹೇಳಿದರು. ಮುಳಿಯ ಸಂಸ್ಥೆಯ ಕೇಶವ ಪ್ರಸಾದ್ ಮುಳಿಯ ಮಾತನಾಡಿ, ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಿ ಬಿಸಾಡುವುದರಿಂದ ಪರಿಸರಕ್ಕೆ ಹಾನಿಯಾಗುತ್ತದೆ. ಆದ್ದರಿಂದ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಕೆಯಿಂದ ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗಲಿದೆ ಎಂದು ಅಭಿಪ್ರಾಯಪಟ್ಟರು. ಜಿಲ್ಲೆಯ ನಾನಾ ಭಾಗಗಳಲ್ಲಿ ಇಂತಹ ಶುದ್ಧ ಕುಡಿಯುವ ನೀರು ಘಟಕ ಅಳವಡಿಸಲು ಚಿಂತನೆ ಮಾಡಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಓಂಕಾರೇಶ್ವರ ದೇವಾಲಯದ ಪಾರುಪತ್ತೆಗಾರ ಚಿ.ನಾ.ಸೋಮೇಶ್ ಮಾತನಾಡಿ, ಓಂಕಾರೇಶ್ವರ ದೇವಸ್ಥಾನ ಬಳಿ ಕುಡಿಯುವ ನೀರು ಘಟಕ ಸ್ಥಾಪಿಸಿ ಭಕ್ತರಿಗೆ ಅನುಕೂಲ ಮಾಡಿಕೊಟ್ಟಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಪತ್ರಕರ್ತರಾದ ಬಿ.ಜಿ.ಅನಂತಶಯನ, ಅನಿಲ್ ಎಚ್.ಟಿ., ಪ್ರಮುಖರಾದ ರವೀಂದ್ರ ರೈ, ಮಿಟ್ಟು ಚಂಗಪ್ಪ, ಟಿ.ಪಿ.ರಮೇಶ್, ಬಿ.ಟಿ.ಪ್ರದೀಪ್, ಬಿ.ಎಸ್.ತಮ್ಮಯ್ಯ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News