ಹೈಕೋರ್ಟ್ ಮೆಟ್ಟಿಲೇರಿದ ಕೆ.ಸುರೇಂದ್ರನ್
Update: 2016-07-02 23:47 IST
ಕಾಸರಗೋಡು, ಜು.2: ಮಂಜೇಶ್ವರ ವಿಧಾನಸಭಾ ಚುನಾವಣಾ ಆಯ್ಕೆಯನ್ನು ರದ್ದುಪಡಿಸುವಂತೆ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ.ಸುರೇಂದ್ರನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಚುನಾವಣೆಯಲ್ಲಿ ನಕಲಿ ಮತದಾನ ಸೇರಿದಂತೆ ಹಲವು ಅಕ್ರಮಗಳು ನಡೆದಿವೆ ಎಂದವರು ಆರೋಪಿಸಿದ್ದಾರೆ.
ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕೆ.ಸುರೇಂದ್ರನ್ ಐಕ್ಯರಂಗದ ಪಿ.ಬಿ.ಅಬ್ದುರ್ರಝಾಕ್ ವಿರುದ್ಧ ಕೇವಲ 89 ಮತಗಳ ಅಂತರದಿಂದ ಸೋಲು ಕಂಡಿದ್ದರು. 2016ರ ಮೇ 16ರಂದು ಚುನಾವಣೆ ನಡೆದಿತ್ತು . ಚುನಾವಣಾ ಪ್ರಕ್ರಿಯೆ ಸಂದರ್ಭದಲ್ಲಿ ನಡೆದ ಮತದಾರರ ಸೇರ್ಪಡೆ ಹಾಗೂ ನಕಲಿ ಮತದಾನದ ಕುರಿತ ಮಾಹಿತಿಗಳನ್ನು ಮಾಧ್ಯಮಗಳು ಪ್ರಕಟಿಸಿವೆ. ಆದ್ದರಿಂದ ಆಯ್ಕೆಯನ್ನು ರದ್ದುಪಡಿಸುವಂತೆ ಕಾನೂನು ಹೋರಾಟ ನಡೆಸುವುದಾಗಿ ಸುರೇಂದ್ರನ್ ತಿಳಿಸಿದ್ದಾರೆ.