×
Ad

ಸಮಾನ ನಾಗರಿಕ ಸಂಹಿತೆ ಕಾನೂನು ಜಾರಿಗೆ ಕೇಂದ್ರ ಸಜ್ಜು?

Update: 2016-07-02 23:57 IST

ಹೊಸದಿಲ್ಲಿ, ಜು.2: ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಕಾನೂನು ಜಾರಿಗೆ ತರಲು ಕೇಂದ್ರ ಸರಕಾರ ಸಿದ್ಧತೆ ನಡೆಸುತ್ತಿದ್ದು, ಈ ವಿಚಾರದ ಬಗ್ಗೆ ಸ್ಪಷ್ಟ ಅಭಿಪ್ರಾಯ ತಿಳಿಸುವಂತೆ ಕಾನೂನು ಆಯೋಗದ ಅಭಿಪ್ರಾಯ ಕೋರಿದೆ. ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಲು ಕೇಂದ್ರ ಸರಕಾರ ಸಿದ್ಧವಿದೆ ಎಂದು ಕಾನೂನು ಸಚಿವ ಸದಾನಂದ ಗೌಡ ಅವರು ಈ ಮುನ್ನ ಹೇಳಿಕೆ ನೀಡಿದ್ದರು. ಆದರೆ ಈ ಸಂಬಂಧ ಸರ್ವ ಪಕ್ಷ ಸಭೆ ನಡೆಸುವುದೂ ಸೇರಿದಂತೆ ಸಂಬಂಧಪಟ್ಟ ಎಲ್ಲರ ಜೊತೆ ಚರ್ಚಿಸಿಯೇ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಆದರೆ ಇದೀಗ ಸಂಸತ್ ಅಧಿವೇಶನ ಆರಂಭಕ್ಕೆ ಮುನ್ನ ಈ ಸಂಬಂಧ ಕಾನೂನು ಆಯೋಗದ ಅಭಿಪ್ರಾಯ ಕೇಳಿರುವುದರಿಂದ ಹೆಚ್ಚಿನ ಮಹತ್ವ ಪಡೆದಿದೆ. ಇದು ಸಂಸತ್ತಿನ ಉಭಯ ಸದನದಲ್ಲಿ ಚರ್ಚೆಗೆ ಬರುವ ಸಾಧ್ಯತೆಗಳೂ ಇವೆ. ಈ ಸಂಬಂಧ ಕೇಂದ್ರ ತನ್ನ ನಿಲುವನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡಾವಿತ್‌ನಲ್ಲಿ ಕೂಡಾ ಸ್ಪಷ್ಟಪಡಿಸಿದೆ. ತಲಾಕ್ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸುತ್ತಿರುವ ಪೀಠ ಪ್ರಕರಣವನ್ನು ಸೆಪ್ಟಂಬರ್‌ಗೆ ಮುಂದೂಡಿದ್ದು, ಈ ವಿಷಯದ ಬಗ್ಗೆ ಸಾರ್ವಜನಿಕ ಚರ್ಚೆ ಅಗತ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News