ಸುಳ್ಯ: ವಾಹನ ಅಪಘಾತದ ಗಾಯಾಳು ಮೃತ್ಯು
Update: 2016-07-04 19:07 IST
ಸುಳ್ಯ, ಜು.4: ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸೈಫುದ್ದೀನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಶನಿವಾರ ರಾತ್ರಿ ಸಹೋದ್ಯೋಗಿ ಬೆಟ್ಟಂಪಾಡಿಯ ಶೌಖತ್‌ರೊಂದಿಗೆ ಅವರ ಬೈಕಿನಲ್ಲಿ ಮೊಗರ್ಪಣೆ ಮಸೀದಿಗೆ ಹೋಗುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಗಾಯಗೊಂಡಿದ್ದ ಶೌಖತ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದರು.
ಗಂಭೀರ ಗಾಯಗೊಂಡಿದ್ದ ಸೈಫುದ್ದೀನ್‌ರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಸುಳ್ಯ ಕೆವಿಜಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.